ಶಿರಾಡಿಯಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ



ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ) ಕಡಬ ತಾಲೂಕು ನೆಲ್ಯಾಡಿ ವಲಯದ ಶಿರಾಡಿ ಒಕ್ಕೂಟದ ವತಿಯಿಂದ ಶಿರಾಡಿ ಶ್ರೀ ಧರ್ಮಶಾಸ್ತ್ರ ಭಜನಾ ಮಂದಿರ ಮತ್ತು ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ನೆಲ್ಯಾಡಿ ವಲಯದ ಮೇಲ್ವಿಚಾರಕರಾದ ಆನಂದ ಡಿ.ಬಿ. ಅವರು ಪರಿಸರ ಸಂರಕ್ಷಣೆಯ ಮಹತ್ವ ಹಾಗೂ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಕುರಿತು ಶ್ಲಾಘನೀಯವಾದ ಮಾಹಿತಿ ನೀಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶಿರಾಡಿ ಒಕ್ಕೂಟದ ಅಧ್ಯಕ್ಷ ಸುಕುಮಾರ್ ಕೆ.ಆರ್., ಕಾರ್ಯದರ್ಶಿ ಗ್ರೇಸಿ ಚಾಕೋಚನ್ ಮತ್ತು ಒಕ್ಕೂಟದ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸದಸ್ಯರ ಪೂರ್ಣ ಹಾಜರಾತಿ ಕಾರ್ಯಕ್ರಮದ ವಿಶೇಷತೆಯಾಗಿದೆ.
ಶ್ರೀ ಅಯ್ಯಪ್ಪ ದೇವಸ್ಥಾನದ ಬಳಿಯಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲ ಸದಸ್ಯರಿಗೆ ಗಿಡಗಳನ್ನು ವಿತರಣೆ ಮಾಡುವ ಮೂಲಕ ಪರಿಸರದ ಬಳಕೆ ಪರಿಕಲ್ಪನೆಗೆ ಪ್ರಾಯೋಗಿಕ ಅರ್ಥ ನೀಡಲಾಯಿತು.
ಶಿರಾಡಿ ಒಕ್ಕೂಟದ ಸೇವಾ ಪ್ರತಿನಿಧಿ ಸುಮಿತ್ರ ಶ್ರೀಧರ್ ಗೌಡ ಕಾರ್ಯಕ್ರಮ ನಿರೂಪಿಸಿದರು. ಸ್ನೇಹ ತಂಡದ ಸದಸ್ಯೆ ರೇಖಾ ವಂದಿಸಿದರು.
























Leave a Reply