ಕಾಂಚನ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಉದ್ಘಾಟನೆ

Kanchana

ಕಾಂಚನ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಉದ್ಘಾಟನೆ

ನೆಲ್ಯಾಡಿ: ಉಜಿರೆ ಎಸ್.ಡಿ.ಎಂ ಎಜುಕೇಶನಲ್ ಸೊಸೈಟಿಯ ಆಡಳಿತಕ್ಕೊಳಪಟ್ಟ ಕಾಂಚನ ಶ್ರೀ ಲಕ್ಷ್ಮೀ ನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.

ವಿದುಷಿ ಸುಮನಸ ರಂಜಿನಿ ಉದ್ಘಾಟಿಸಿ ಮಾತನಾಡಿ, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಾಗಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯಗುರು ಎ.ಲಕ್ಷ್ಮಣ ಗೌಡರವರು ಮಾತನಾಡಿ, ಶಿಕ್ಷಣದ ಜೊತೆಗೆ ಯಕ್ಷಗಾನ, ಸಂಗೀತ, ಚಿತ್ರಕಲೆ ಮತ್ತು ನೃತ್ಯ ಮುಂತಾದ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆವಣಿಗೆಗೆ ಅವಶ್ಯಕ ಎಂದು ಹೇಳಿದರು.

ವೇದಿಕೆಯಲ್ಲಿ ನೃತ್ಯ ಶಿಕ್ಷಕಿ ಪೂಜಾ ಹಾಗೂ ಚಿತ್ರಕಲಾ ಶಿಕ್ಷಕ ಮಾಯಿಲಪ್ಪ ಉಪಸ್ಥಿತರಿದ್ದರು. ಸಹಶಿಕ್ಷಕಿ ಹೇಮಾವತಿ ಸ್ವಾಗತಿಸಿ, ಚೈತನ್ಯ ವಂದಿಸಿದರು. ಸುಮಾ ಡಿ. ಕಾರ್ಯಕ್ರಮ ನಿರೂಪಿಸಿದರು.

  •  

Leave a Reply

You May Have Missed

error: Content is protected !!