ಬೈಕ್ ಡಿಕ್ಕಿ ಹೊಡೆದು ಮಹಿಳೆ ಮೃತ್ಯು

Accident

ಬೈಕ್ ಡಿಕ್ಕಿ ಹೊಡೆದು ಮಹಿಳೆ ಮೃತ್ಯು

ಸಂಪಾಜೆ: ಕಲ್ಲುಗುಂಡಿ ಅಂಚೆ ಕಚೇರಿ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿರುವ ಘಟನೆ ರವಿವಾರ ವರದಿಯಾಗಿದೆ.

ಸಂಪಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಮಾರ್ ಚೆದ್ಮಾರ್ ಅವರ ತಾಯಿ ಕಮಲ ಚೆದ್ಮಾರ್(67) ಅವರು ಕಲ್ಲುಗುಂಡಿಯ ಅಂಚೆ ಕಚೇರಿಯ ಬಳಿ ಬಸ್ ನಿಲ್ದಾಣದಿಂದ ಸಂಪಾಜೆ ಕಡೆ ಹೋಗುವ ಬಸ್ ಹತ್ತಲು ರಸ್ತೆ ದಾಟುತ್ತಿದ್ದ ವೇಳೆ ಅದೇ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಕೇರಳ ಮೂಲದ ಬೈಕ್ ನಿಯಂತ್ರಣ ತಪ್ಪಿ ಅವರಿಗೆ ಡಿಕ್ಕಿ ಹೊಡೆಯಿತು. ಪರಿಣಾಮವಾಗಿ ಮಹಿಳೆಗೆ ಗಂಭೀರ ಗಾಯವಾಗಿದ್ದು ಅವರನ್ನು ಕೆ ವಿ ಜಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

  •  

Leave a Reply

You May Have Missed

error: Content is protected !!