ಕಳೆಂಜ: ಹೃದಯ-ಶ್ವಾಸ ಪುನಶ್ಚೇತನ ಮಾಹಿತಿ ಮತ್ತು ತರಬೇತಿ


ಕಳೆಂಜ: ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 27ರಂದು ಕಳಂಜ ಸೈಂಟ್ ಸೆಬಾಸ್ಟಿನ್ ಚರ್ಚ್ ಹಾಲ್ ನಲ್ಲಿ ಹೃದಯ-ಶ್ವಾಸ ಪುನಶ್ಚೇತನ ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ಅಧ್ಯಕ್ಷರಾದ ಅಗಸ್ಟೀನ್ ಟಿ.ಎ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಫಾ.ಸುನಿಲ್ ಪೂವತಿಂಗಲ್ ಉಪಸ್ಥಿತರಿದ್ದರು. ಉಜಿರೆ ಎಸ್ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ನರ್ಸಿಂಗ್ ಸೂಪೆರಿಂಟೆಂಡೆಂಟ್ ಶೆರ್ಲಿ ಮತ್ತು ಅವರ ವೈದ್ಯಕೀಯ ತಂಡ ಹೃದಯ-ಶ್ವಾಸ ಪುನಶ್ಚೇತನ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡಿದರು.
ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ಉಪಾಧ್ಯಕ್ಷರಾದ ಮ್ಯಾಥ್ಯೂ ವಿ.ಟಿ, ಕೋಶಾಧಿಕಾರಿ ರಂಜಿತ್ ಪಿ.ಎಸ್, ಸಂಘದ ಇತರೆ ಸದಸ್ಯರು ಹಾಗೂ ಊರಿನ ಸಾರ್ವಜನಿಕರು ಭಾಗವಹಿಸಿ ಮಾಹಿತಿ ಮತ್ತು ತರಬೇತಿಯನ್ನು ಪಡೆದುಕೊಂಡರು.
ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ಕಾರ್ಯದರ್ಶಿ ಶಿಜೋ ಜೋಸೆಫ್ ಸ್ವಾಗತಿಸಿದರು ಕಾರ್ಯಕ್ರಮ ನಿರೂಪಿಸಿದರು.

























Leave a Reply