ಶಿಶಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Kokkada

ಶಿಶಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಕೊಕ್ಕಡ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಶಿಶಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಶ್ರೀಧರ ದಾಮ್ಲೆರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಶಾಸಕರಾದ ಹರೀಶ್ ಪೂಂಜರವರು ಸಭೆಯಲ್ಲಿ ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಹಾಗೂ ಕಾರ್ಯಚಟುವಟಿಕೆಗಳ ಕುರಿತು ವಿಸ್ತೃತ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಂಡಲ ಉಪಾಧ್ಯಕ್ಷರು ಹಾಗೂ ಅಭ್ಯಾಸವರ್ಗ ಸಂಚಾಲಕರಾದ ಕೊರಗಪ್ಪ ಗೌಡ ಚಾರ್ಮಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಹಾಬಲ ಗೌಡ ಬಂದಾರು, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಭಾರಿ ಯೋಗೀಶ್ ಗೌಡ ಆಲಂಬಿಲ, ನಾರಾವಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್ ಬೈಠಕ್ ನೀಡಿದರು.

ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀನ್ ಡಿ, ಶಕ್ತಿ ಕೇಂದ್ರ ಪ್ರಮುಖರು, ಜನಪ್ರತಿನಿಧಿಗಳು, ಹಾಗೂ ವಿವಿಧ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.

  •  

Leave a Reply

You May Have Missed

error: Content is protected !!