ನೆಲ್ಯಾಡಿ ಪೇಟೆ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಹಾಗೂ ನೂತನ ಧ್ವಜಸ್ತಂಭ ಉದ್ಘಾಟನೆ

Nellyadi

ನೆಲ್ಯಾಡಿ ಪೇಟೆ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಹಾಗೂ ನೂತನ ಧ್ವಜಸ್ತಂಭ ಉದ್ಘಾಟನೆ

ನೆಲ್ಯಾಡಿ: ದೇಶಪ್ರೇಮದ ಹಬ್ಬದ ಸಂಭ್ರಮದಲ್ಲಿ, ನೆಲ್ಯಾಡಿ ಪೇಟೆ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ನೂತನವಾಗಿ ನಿರ್ಮಿಸಿದ ಧ್ವಜಸ್ತಂಭದ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.

ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಇಕ್ಬಾಲ್ ಅವರು ಸದಸ್ಯರ ಅನುದಾನದಲ್ಲಿ ನಿರ್ಮಿಸಲಾದ ಧ್ವಜಸ್ತಂಭವನ್ನು, ನೆಲ್ಯಾಡಿ ಹೊರಠಾಣೆಯ ಠಾಣಾಧಿಕಾರಿ ಹೆಡ್ ಕಾನ್ಸ್ಟೇಬಲ್ ಪ್ರವೀಣ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ, ಹಾಜರಿದ್ದ ಎಲ್ಲರಿಗೂ ದೇಶಭಕ್ತಿ ಸಂದೇಶ ಹಂಚಿದರು. ಬಳಿಕ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ರಮ್ಲತ್ ಅವರು ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷ ಸಲಾಂ ಬಿಲಾಲ್, ಸದಸ್ಯೆ ಉಷಾ ಜೋಯಿ, ನೆಲ್ಯಾಡಿ ಮಸೀದಿ ಅಧ್ಯಕ್ಷ ಎನ್.ಎಸ್. ಸುಲೇಮಾನ್, ನೋಟರಿ ವಕೀಲ ಇಸ್ಮಾಯಿಲ್ ನೆಲ್ಯಾಡಿ, ವರ್ತಕ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್, ಜೋಸ್ ಮಾತಾ, ನಾಸಿಂ ಸಾಹೇಬ್ ಸೇರಿದಂತೆ ಗ್ರಾಮ ಪಂಚಾಯಿತಿನ ಸಿಬ್ಬಂದಿಗ ಳು, ಗ್ರಾಮದ ಗಣ್ಯರು, ಬಾಲ ವಿಕಾಸ ಸಮಿತಿಯ ಪದಾಧಿಕಾರಿಗಳು, ಅಂಗನವಾಡಿ ಮಕ್ಕಳ ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಇಕ್ಬಾಲ್ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಕುಸುಮಾವತಿ ವಂದಿಸಿದರು.

  •  

Leave a Reply

You May Have Missed

error: Content is protected !!