ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ – ಸುಳ್ಯ ಸಾಂದೀಪ ವಿಶೇಷ ಚೇತನ ಶಾಲೆಯಲ್ಲಿ ಅರ್ಥಪೂರ್ಣ ಕಾರ್ಯಕ್ರಮ

ಸಾಂದೀಪ

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ – ಸುಳ್ಯ ಸಾಂದೀಪ ವಿಶೇಷ ಚೇತನ ಶಾಲೆಯಲ್ಲಿ ಅರ್ಥಪೂರ್ಣ ಕಾರ್ಯಕ್ರಮ

ಸುಳ್ಯ: ಕರ್ನಾಟಕ ರಾಜ್ಯ ಉಪವಲಯಾರಣ್ಯಾಧಿಕಾರಿಗಳ ಸಂಘ ಮಂಗಳೂರು ವಿಭಾಗದ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಸುಳ್ಯದ ಸಾಂದೀಪ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿಶೇಷ ಚೇತನ ಮಕ್ಕಳಿಗೆ ಸಂಘದ ವತಿಯಿಂದ ಮಧ್ಯಾಹ್ನದ ಊಟ, ಹಣ್ಣು ಹಂಪಲು ಹಾಗೂ ಸಿಹಿ ವಿತರಣೆ ಮಾಡಲಾಯಿತು.

ಕಾರ್ಯಕ್ರಮವನ್ನು ಸುಬ್ರಮಣ್ಯ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಪೈ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಸಾಂದೀಪ ವಿಶೇಷ ಚೇತನ ಶಾಲೆಯ ಸಂಸ್ಥಾಪಕ ಎಂ.ಬಿ.ಸದಾಶಿವ ವಹಿಸಿದ್ದರು.

ವೇದಿಕೆಯಲ್ಲಿ ಮಂಗಳೂರು ವಿಭಾಗದ ಉಪ ವಲಯಾರಣ್ಯಾಧಿಕಾರಿ ಸಂಘದ ಅಧ್ಯಕ್ಷ ಸುನಿಲ ಕುಮಾರ ಬಿ.ಯು, ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಶಾಲೆಯ ಮುಖ್ಯಶಿಕ್ಷಕಿ ಹರಿಣಿ ಸದಾಶಿವ, ಶಾಲಾ ಸಂಚಾಲಕಿ ನೇತ್ರಾವತಿ ಉಪಸ್ಥಿತರಿದ್ದರು.

ಸಂಘದ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಹಾಗೂ ಅರಣ್ಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ದಿನಾಚರಣೆಯನ್ನು ಯಶಸ್ವಿಗೊಳಿಸಿದರು.

  •  

Leave a Reply

You May Have Missed

error: Content is protected !!