ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಳದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Ayappa

ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಳದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಭಕ್ತಿಭಾವದಿಂದ ನೆರವೇರಿತು.

ಶ್ರೀ ದೇವಳದ ಗೌರವಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಸಂಪುಟ ನರಸಿಂಹಸ್ವಾಮಿ ಮಠ, ಸುಬ್ರಹ್ಮಣ್ಯ ಅವರ ಕೃಪಾಶೀರ್ವಾದದೊಂದಿಗೆ ಶ್ರೀಧರ ನೂಜಿನ್ನಾಯ ಅವರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

ಕಾರ್ಯಕ್ರಮದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಡಾ.ಸದಾನಂದ ಕುಂದರ್, ಉಪಾಧ್ಯಕ್ಷರಾದ ರವಿಚಂದ್ರ ಹೊಸವಕ್ಲು, ಕಾರ್ಯದರ್ಶಿ ಸುಧೀರ್ ಕುಮಾರ್ ಕೆ.ಎಸ್., ಕೋಶಾಧಿಕಾರಿ ವಿನೋದ್ ಕುಮಾರ್ ಬಿ.ಜೆ. ಹಾಗೂ ಆಡಳಿತ ಮಂಡಳಿಯ ಸದಸ್ಯರು, ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.

ಮಹಾಪೂಜೆಯ ನಂತರ ತೀರ್ಥ ಪ್ರಸಾದ ವಿತರಿಸಿ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿತ್ತು.

  •  

Leave a Reply

You May Have Missed

error: Content is protected !!