ಸಂಪಡ್ಕ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಕೆ – ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಹಾಯಧನ

ಸಂಪಡ್ಕ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಕೆ – ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಹಾಯಧನ

ಸಂಪಡ್ಕ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಕೆ – ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಹಾಯಧನ

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಕಡಬದ ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಪಡ್ಕ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಕೆ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಹಾಯಧನವನ್ನು ಮಂಜೂರು ಮಾಡಿದ್ದಾರೆ.

ಸಿಲಿಕಾನ್ ಚೇಂಬರ್ ಖರೀದಿಗಾಗಿ ₹1,53,630 ರೂ. ಮಂಜೂರುಗೊಂಡಿದ್ದು, ಅದರ ಮಂಜೂರಾತಿ ಪತ್ರವನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ರವರು ಮಂಜೂರಾತಿ ಪತ್ರವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮನಾ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆನಂದ್ ಎ ಅವರಿಗೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಕಿರಣ್ ಗೊಗಟೆ, ಮಹಮ್ಮದ್ ಅಲಿ, ಸುಧೀರ್ ದೇವಾಡಿಗ, ಲಕ್ಷ್ಮೀಶ ಬಂಗೇರ, ಕುಟ್ರುಪಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಶಿವಪ್ರಸಾದ್ ಪುತ್ತಿಲ, ವಲಯ ಮೇಲ್ವಿಚಾರಕರಾದ ವಿಜೇಶ್ ಜೈನ್, ವಾಲ್ಯ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್, ವಾಲ್ಯ, ಬಲ್ಯ, ದೇರಾಜೆ, ಕುಟ್ರುಪಾಡಿ ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳಾದ ದುರ್ಗಾವತಿ, ಪುಷ್ಪಲತಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

  •  

Leave a Reply

You May Have Missed

error: Content is protected !!