ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದಿಂದ ಡಾ.ಡಿ ವೀರೇಂದ್ರ ಹೆಗ್ಗಡೆ ಭೇಟಿ- ಹುಟ್ಟುಹಬ್ಬದ ಶುಭಾಶಯ ತಿಳಿಸಿದ ತಂಡ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದಿಂದ ಡಾ.ಡಿ ವೀರೇಂದ್ರ ಹೆಗ್ಗಡೆ ಭೇಟಿ- ಹುಟ್ಟುಹಬ್ಬದ ಶುಭಾಶಯ ತಿಳಿಸಿದ ತಂಡ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದಿಂದ ಡಾ.ಡಿ ವೀರೇಂದ್ರ ಹೆಗ್ಗಡೆ ಭೇಟಿ- ಹುಟ್ಟುಹಬ್ಬದ ಶುಭಾಶಯ ತಿಳಿಸಿದ ತಂಡ

ಕೊಕ್ಕಡ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದ ಸದಸ್ಯರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶುಭಾಶಯ ತಿಳಿಸಿದರು.

ಈ ಸಂದರ್ಭ ಹೆಗ್ಗಡೆರವರಿಗೆ ಶುಭಾಶಯ ತಿಳಿಸಿದ ಬಳಿಕ, ತಂಡದ ಸದಸ್ಯರು ಡಿ. ಹರ್ಷೇಂದ್ರ ಕುಮಾರ್ ಅವರನ್ನು ಭೇಟಿ ಮಾಡಿ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡ ಕಳೆದ ಕೆಲ ವರ್ಷಗಳಿಂದ ನಡೆಸುತ್ತಿರುವ ವಿವಿಧ ಸಾಮಾಜಿಕ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

ಸಮಾಜಮುಖಿ ಕಾರ್ಯಗಳ ಮಹತ್ವವನ್ನು ಮೆಚ್ಚಿದ ಡಿ.ಹರ್ಷೇಂದ್ರ ಕುಮಾರ್ ರವರು, ತಂಡವು ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದರು ಎಂದು ತಂಡದ ಅಧ್ಯಕ್ಷ ಅಗಸ್ಟೀನ್ ತಿಳಿಸಿದರು.

ಈ ಸಂಧರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ, ಕಾರ್ಯದರ್ಶಿ ಶಿಜೋ ಜೋಸೆಫ್, ಮಾಜಿ ಉಪಾಧ್ಯಕ್ಷ ಶಾಜಿ ತೋಮಸ್, ಮಾಜಿ ಕಾರ್ಯದರ್ಶಿ ತೋಮಸ್ ಹಾಗೂ ಸಂಘದ ಸದಸ್ಯ ಶೆರ್ಲಿ ಉಪಸ್ಥಿತರಿದ್ದರು.

  •  

Leave a Reply

You May Have Missed

error: Content is protected !!