ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಹಾಯಧನ

ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಹಾಯಧನ

ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಹಾಯಧನ

ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ನ.24ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಸಂಘದಲ್ಲಿ ಅಳವಡಿಸಿರುವ ನೂತನ ಲಿಫ್ಟ್ ಹಾಗೂ ಇತರ ಕಾಮಗಾರಿಗಳಿಗೆ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡಲಾದ 5 ಲಕ್ಷ ಮೊತ್ತದ ಸಹಾಯಧನದ ಚೆಕ್ಕನ್ನು ಸಂಘದ ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಶಿಕುಮಾರ್ ರೈ ಅವರು ಸಂಘವು ಹೊಸತನದೊಂದಿಗೆ ಸದಸ್ಯರಿಗೆ ಸೇವೆಯನ್ನು ನೀಡುತ್ತಿರುವುದು ಮತ್ತು ಹೆಚ್ಚಿನ ವ್ಯವಹಾರವಿದ್ದರೂ ಶೇಕಡ 100 ಸಾಲ ವಸೂಲಾತಿ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಸಂಘದ ವತಿಯಿಂದ ಅವರನ್ನು ಅಭಿನಂದಿಸಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ.ರೈ.ಕೆ.ಯಂ ವ್ಯವಸ್ಥಾಪಕ ಮಹೇಶ್ ಎಂ.ಟಿ ಸಿಬ್ಬಂದಿಗಳಾದ ಸಂದೀಪ್ ಶೆಟ್ಟಿ, ಧನುಷ್, ಪ್ರಜ್ಞಾ ಮಾರ್ಲ, ವನಿತ ಶೆಟ್ಟಿ , ಪ್ರಮೋದ್ ಅವರುಗಳು ಉಪಸ್ಥಿತರಿದ್ದರು.

  •  
Previous post

ಜೆಸಿಐ ಕೊಕ್ಕಡ ಕಪಿಲಾ ಘಟಕದ 2026ನೇ ಸಾಲಿನ ಹೊಸ ಅಧ್ಯಕ್ಷ–ಕಾರ್ಯದರ್ಶಿ ಆಯ್ಕೆ

Next post

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ವತಿಯಿಂದ ಖಾವಂದರ ಹುಟ್ಟುಹಬ್ಬ ಆಚರಣೆ

Leave a Reply

You May Have Missed

error: Content is protected !!