ವಿಟ್ಲ: ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಅಗ್ನಿ ಅವಘಡ – ಇಲೆಕ್ಟ್ರಾನಿಕ್ಸ್ ಅಂಗಡಿ, ಹೋಟೆಲ್, ಡ್ರೈವಿಂಗ್ ಸ್ಕೂಲ್ ಭಸ್ಮ

ವಿಟ್ಲ: ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಅಗ್ನಿ ಅವಘಡ – ಇಲೆಕ್ಟ್ರಾನಿಕ್ಸ್ ಅಂಗಡಿ, ಹೋಟೆಲ್, ಡ್ರೈವಿಂಗ್ ಸ್ಕೂಲ್ ಭಸ್ಮ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯಲ್ಲಿರುವ ಶ್ರೀ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬುಧವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, ಕ್ಷಣಾರ್ಧದಲ್ಲಿ ಭಾರೀ ಅಗ್ನಿ ಅವಘಡವಾಗಿ ಮಾರ್ಪಟ್ಟ ಘಟನೆ ನಡೆದಿದೆ.

ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೆ ಹೊತ್ತಿಕೊಂಡು ಸಂಪೂರ್ಣ ಅಂಗಡಿಯನ್ನು ಆಹುತಿಗೊಳಿಸಿತು.

ಅಗ್ನಿಯ ತೀವ್ರತೆ ಹೆಚ್ಚುತ್ತಿದ್ದಂತೆ ಹತ್ತಿರದಲ್ಲೇ ಇರುವ ಅಮಿತ್ ಹೋಟೆಲ್ ಹಾಗೂ ಗಣೇಶ್ ಡ್ರೈವಿಂಗ್ ಸ್ಕೂಲ್‌ನ ಅಂಗಡಿ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿ, ಅವುಗಳಲ್ಲಿದ್ದ ವಸ್ತುಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬೆಂಕಿ ಕಾಣಿಸಿಕೊಂಡ ಕ್ಷಣದಲ್ಲೇ ಸ್ಥಳೀಯರು ಆತಂಕಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ವಾಹನಗಳು ದೀರ್ಘ ಸಮಯದ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಹೊತ್ತಿಕೊಂಡಿರ ಬಹುದೆಂದು ಅಂದಾಜಿಸಲಾಗಿದೆ.
ಘಟನೆಯಿಂದಾಗಿ ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

  •  

Leave a Reply

You May Have Missed

error: Content is protected !!