ಪುಂಜಾಲಕಟ್ಟೆ ಬಳಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಪುಂಜಾಲಕಟ್ಟೆ ಬಳಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಪುಂಜಾಲಕಟ್ಟೆ ಬಳಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಪುಂಜಾಲಕಟ್ಟೆ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಜ.24ರಂದು ಮಡಂತ್ಯಾರು ಸಮೀಪ ನಡೆದಿದೆ.

ಕಾವಳಮೂಡೂರು ಕಾರಿಂಜ ಪಡಿ ನಿವಾಸಿ ಪದ್ಮನಾಭ ದೇವಾಡಿಗ (45) ಮೃತರು.

ಮೃತ ಪದ್ಮನಾಭ ದೇವಾಡಿಗ ಅವರು ಉಪ್ಪಿನಂಗಡಿಯ ಹೋಟೆಲ್ ಒಂದರಲ್ಲಿ ಸಪ್ಲಾಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಮೂರು ದಿನಕ್ಕೊಮ್ಮೆ ಮನೆಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ. ಜ.23ರ ರಾತ್ರಿ ಹೋಟೆಲ್‌ನಲ್ಲಿ ಕೆಲಸ ಮುಗಿಸಿಕೊಂಡು ಸುಮಾರು ರಾತ್ರಿ 11.30ರ ಸುಮಾರಿಗೆ ಮನೆಗೆ ಮರಳುತ್ತಿದ್ದ ವೇಳೆ, ಪುಂಜಾಲಕಟ್ಟೆ–ಮಡಂತ್ಯಾರು ಮಧ್ಯಭಾಗದಲ್ಲಿ ಮಂಗಳೂರು ವಿಮಾನ ನಿಲ್ದಾಣದ ದಿಕ್ಕಿನಿಂದ ಬರುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಒಬ್ಬ ಗಂಡು ಮತ್ತು ಒಬ್ಬ ಹೆಣ್ಣು ಮಗಳನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

You May Have Missed

error: Content is protected !!