ತಡೆಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಪ್ರಾಣಪಾಯದಿಂದ ಪಾರು

ತಡೆಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಪ್ರಾಣಪಾಯದಿಂದ ಪಾರು

ತಡೆಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಪ್ರಾಣಪಾಯದಿಂದ ಪಾರು

ನೆಲ್ಯಾಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಜ.30ರಂದು ಮಧ್ಯಾಹ್ನ 1.30ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಕಾರು ತಡೆಗೋಡೆಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ದಾಖಲಾಗಿದೆ.

ಕಾರನ್ನು ಚಾಲನೆ ಮಾಡುತ್ತಿದ್ದ ರಾಜಾಜಿನಗರ, ಬೆಂಗಳೂರು ಮೂಲದ ಹರ್ಷಿತ್ ಜಿ (29) ಅವರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಕಾರು ಸಂಪೂರ್ಣ ಸುಟ್ಟು ಭಸ್ಮವಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಲಿಲ್ಲ.

ಘಟನೆಯ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!