ಕರ್ನಾಟಕ
# accident #kadaba #shiradi #nellyady #ksrtc, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
0 Comments
ಮೋಸ್ಟ್ ವಾಂಟೆಡ್ ನಕ್ಸಲ್ ಜಯಣ್ಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು



ಬೆಳ್ತಂಗಡಿ: ಕುತ್ಲೂರು ಎಂಬಲ್ಲಿ 2012ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದಂತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು.
ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಬಂಧಿತ ನಕ್ಸಲ್ ಮಹೇಶ್@ಜಯಣ್ಣ@ಜಾನ್ ಅವರನ್ನು ಕೇರಳ ರಾಜ್ಯದ ಪೊಲೀಸರು ಬಿಗಿ ಭದ್ರತೆಯೊಂದಿಗೆ ಫೆ.19 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ಮೊಸ್ಟ್ ವಾಟೆಂಡ್ ನಕ್ಸಲ್ ಆಗಿದ್ದ ಮಹೇಶ್ ಮೂಲಃತ ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕರ್ ಕಾಲನಿಯ ಮಹೇಶ್ ಆಲಿಯಾಸ್ ಜಯಣ್ಣ ಆಲಿಯಾಸ್ ಜಾನ್ ಆಲಿಯಾಸ್ ಮಾರಪ್ಪ ಎಂಬ ಹೆಸರುಗಳಿವೆ.
ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012 ರಲ್ಲಿ ಕುತ್ಲೂರು ಲಿಂಗಪ್ಪ ಮಲೆಕುಡಿಯ ಮನೆಯ ಅಂಗಳದಲ್ಲಿ ನಕ್ಸಲ್ ಕರಪತ್ರ ಹಚ್ಚಿದ್ದ ಪ್ರಕರಣವನ್ನು ಮರು ತನಿಖೆಗೆ ಆದೇಶ ಹೊರಡಿಸಿದ ಕಾರಣ ಅವರನ್ನು ಬೆಳ್ತಂಗಡಿ ನ್ಯಾಯಲಕ್ಕೆ ಹಾಜರು ಪಡಿಸಲಾಗಿದೆ. ಕಳೆದ ಆರು ತಿಂಗಳಿಂದ ಕೇರಳದ ಜೈಲಿನಲ್ಲಿದ್ದಾರೆ, ಕರ್ನಾಟಕದ ನಕ್ಸಲ್ ಮುಖಂಡರುಗಳೊಂದಿಗೆ ಮಹೇಶ್ ಅವರೂ ರಾಜ್ಯದ ಸಿಎಂ ಮುಂದೆ ಶರಣಾತಿಯಾಗಿದ್ದರು.





















Leave a Reply