ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಬಿಷಪ್ ಪೋಳಿಕಾರ್ಪೋಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ ಆಚರಣೆ

ನೆಲ್ಯಾಡಿ: ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಸ್ಥಾಪಕ ಅಧ್ಯಕ್ಷ ದಿವಂಗತ ಪರಮಪೂಜ್ಯ ಬಿಷಪ್ ಪೋಳಿಕಾರ್ಪೋಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ ಕಾರ್ಯಕ್ರಮವು ಶುಕ್ರವಾರ ವಿದ್ಯಾಸಂಸ್ಥೆಯ ಆವರಣದಲ್ಲಿ ಭಕ್ತಿಭಾವದಿಂದ ನಡೆಯಿತು.

ಕಾರ್ಯಕ್ರಮದ ಆರಂಭದಲ್ಲಿ ಬಿಷಪ್ ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಗೌರವ ಸಲ್ಲಿಸಲಾಯಿತು. ಸಂಸ್ಥೆಯ ಸಹ ಸಂಚಾಲಕ ಡೀಕನ್ ಜಾರ್ಜ್ ಅವರು ದೀಪ ಪ್ರಜ್ವಲನೆ ಮಾಡಿ ಪೂಜ್ಯರಿಗೆ ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸೈಂಟ್ ಆಂಟನೀಸ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಶ್ರೀಧರ ಗೌಡ ಅವರು, ಬಿಷಪ್ ಪೋಳಿಕಾರ್ಪೋಸ್ ಮಾರ್ ಗೀವರ್ಗೀಸ್ ಅವರು ಉದನೆಯಂತಹ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು. ಅವರ ದೂರದೃಷ್ಟಿ ಹಾಗೂ ಶ್ರಮದ ಫಲವಾಗಿ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ಇಂದು ಉತ್ತಮ ವಿದ್ಯಾಸಂಸ್ಥೆಯಾಗಿ ತಲೆಯೆತ್ತಿ ನಿಂತಿದೆ ಎಂದರು.

ಬಳಿಕ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಬಿಷಪ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಆಂಗ್ಲಮಾಧ್ಯಮ ವಿಭಾಗದ ಮುಖ್ಯಶಿಕ್ಷಕ ಸಿಬಿಚ್ಚನ್ ಟಿ.ಸಿ., ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!