ಚಾರ್ಮಾಡಿ ಘಾಟ್ ನಲ್ಲಿ ಟಿಟಿ ವಾಹನ ಪಲ್ಟಿ- 9 ಮಂದಿಗೆ ಗಾಯ ಓರ್ವ ಸಾವು





ಬೆಳ್ತಂಗಡಿ: ಚಾರ್ಮಾಡಿ ಘಾಟ್ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಚಿಟಿ ವಾಹನ ಹತ್ತನೇ ತಿರುವು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ (ಮಾ.21) ನಡೆದಿದೆ.
ಅಪಘಾತದ ಪರಿಣಾಮವಾಗಿ ವಾಹನದಲ್ಲಿದ್ದ ಒಂಬತ್ತು ಮಂದಿಗೆ ಗಾಯಗಳಾಗಿದ್ದು ಅವರಲ್ಲಿ ಶೇಖರಪ್ಪ (59) ಎಂಬವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.
ಘಾಟ್ ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.




















Leave a Reply