ಇಚ್ಲಂಪಾಡಿ: ಕಾರು- ಟಿಟಿ ವಾಹನ ನಡುವೆ ಅಪಘಾತ; ಮಹಿಳೆಗೆ ಗಾಯ

ಇಚ್ಲಂಪಾಡಿ: ಕಾರು- ಟಿಟಿ ವಾಹನ ನಡುವೆ ಅಪಘಾತ; ಮಹಿಳೆಗೆ ಗಾಯ

ಇಚ್ಲಂಪಾಡಿ: ಕಾರು- ಟಿಟಿ ವಾಹನ ನಡುವೆ ಅಪಘಾತ; ಮಹಿಳೆಗೆ ಗಾಯ

 

ನೆಲ್ಯಾಡಿ: ಇಚ್ಲಂಪಾಡಿ ಸಮೀಪದ ನಡುಮನೆ ಕ್ರಾಸ್ ಬಳಿ ಏ.2ರಂದು ಟಿಟಿ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಸುಬ್ರಮಣ್ಯದಿಂದ ಧರ್ಮಸ್ಥಳದತ್ತ ಸಾಗುತ್ತಿದ್ದ ಟಿಟಿ ವಾಹನ ಹಾಗೂ ಬೆಳ್ತಂಗಡಿ ತಾಲೂಕಿನ ನಾವೂರಿನಿಂದ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಬ್ಬ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ಪರಿಣಾಮ ಎರಡೂ ವಾಹನಗಳು ನಜ್ಜುಗುಜ್ಜಾಗಿದೆ.

 

Leave a Reply

You May Have Missed

error: Content is protected !!