ಪಾದಚಾರಿಗೆ ಕ್ರೇನ್ ಡಿಕ್ಕಿ – ಸ್ಥಳದಲ್ಲೇ ಸಾವು

ಪಾದಚಾರಿಗೆ ಕ್ರೇನ್ ಡಿಕ್ಕಿ – ಸ್ಥಳದಲ್ಲೇ ಸಾವು

ಪಾದಚಾರಿಗೆ ಕ್ರೇನ್ ಡಿಕ್ಕಿ – ಸ್ಥಳದಲ್ಲೇ ಸಾವು

 

ಪಾದಚಾರಿಗೆ ಕ್ರೇನ್ ಡಿಕ್ಕಿ – ಸ್ಥಳದಲ್ಲೇ ಸಾವು

ಬೆಳ್ತಂಗಡಿ : ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಮಂಗಳವಾರದಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿ ಒಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ತಮಿಳುನಾಡು ಮೂಲದ ಮಹಾಲಿಂಗಂ(53) ಎಂದು ಗುರುತಿಸಲಾಗಿದೆ. ಇವರು ಪ್ರಸ್ತುತ ಪುತ್ತೂರು ತಾಲೂಕಿನ ಕೊಳ್ತಿಗೆ ಎಂಬಲ್ಲಿ ವಾಸವಾಗಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿಯ ಪ್ರಕಾರ, ಮಹಾಲಿಂಗಂ ಅವರು ಪಿಲಿಗೂಡು ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಗುರುವಾಯನಕೆರೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕ್ರೇನ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಮಹಾಲಿಂಗಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂಬಂಧ ಮೃತರ ಮಗ ಸುಧೀನ್ ಅವರು ನೀಡಿದ ದೂರಿನ ಮೇರೆಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

Leave a Reply

You May Have Missed

error: Content is protected !!