ಏ.11ರಂದು ನೆಲ್ಯಾಡಿ-ಕೌಕ್ರಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನೈಶ್ಚರ ಪೂಜೆ

ನೆಲ್ಯಾಡಿ : ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಏ.11ರಂದು ಶನಿವಾರ ಬೆಳಗ್ಗೆ 9.30ರಿಂದ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶ್ರೀ ದೇವಳದ ಗೌರವಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು, ಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯ ಇವರ ಕೃಪಾಶೀರ್ವಾದದೊಂದಿಗೆ ಪೂಜೆ ನಡೆಯಲಿದ್ದು, ವೇದಮೂರ್ತಿ ಬ್ರಹ್ಮಶ್ರೀ ಪುರೋಹಿತ ನಾಗರಾಜ ಭಟ್ ಸುಳ್ಯ ಇವರ ಪೌರೋಹಿತ್ಯದಲ್ಲಿ ವಿಧಿವಿಧಾನಗಳು ನೆರವೇರಲಿವೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪೂಜೆಯ ಫಲಾನುಭವ ಪಡೆಯುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.

ಈ ಕುರಿತು ದೇವಸ್ಥಾನದ ಅಧ್ಯಕ್ಷ ರವಿಚಂದ್ರ ಹೊಸವಕ್ಷು, ಉಪಾಧ್ಯಕ್ಷ ರಘುನಾಥ ಕೆ., ಪ್ರಧಾನ ಕಾರ್ಯದರ್ಶಿ ರಾಕೇಶ್ ಎಸ್., ಕೋಶಾಧಿಕಾರಿ ಸುಧೀರ್ ಕುಮಾರ್ ಕೆ.ಎಸ್., ಜತೆ ಕಾರ್ಯದರ್ಶಿ ರಮೇಶ್ ಬಾಣಜಾಲು, ಪ್ರಧಾನ ಅರ್ಚಕ ಶ್ರೀಧರ ನೂಜಿನ್ನಾಯ, ಸಹ ಅರ್ಚಕ ಅಶ್ವತ್ ನಾರಾಯಣ ತೋಡ್ತಿಲ್ಲಾಯ ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

You May Have Missed

error: Content is protected !!