ಬೈಕ್‌ಗೆ ಲಾರಿ ಡಿಕ್ಕಿ – ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಕಾರ್ತಿಕ್ ಸಾವು, ವಿದ್ಯಾರ್ಥಿನಿ ಗಂಭೀರ ಗಾಯ

ನೆಲ್ಯಾಡಿ: ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಕಾರ್ತಿಕ್(24) ಎಂಬ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಸಹ ಸವಾರಿಣಿ ಕಾಲೇಜು ವಿದ್ಯಾರ್ಥಿನಿ ನೇಹಾ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪರಿಚಿತರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ದ್ವಿಚಕ್ರ ವಾಹನಗಳಲ್ಲಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಸಂದರ್ಭ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭಾರೀ ರಭಸಕ್ಕೆ ಸವಾರ ಕಾರ್ತಿಕ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗೊಂಡಿರುವ ನೇಹಾ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಕಾರ್ತಿಕ್ ಉಪ್ಪಿನಂಗಡಿಯ ಶಿವಕುಮಾರ್ ಗಾಂಧೀಪಾರ್ಕ್ ಅವರ ಪುತ್ರರಾಗಿದ್ದು, ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿಯಾಗಿದ್ದರು. ಇಬ್ಬರು ಮಕ್ಕಳಲ್ಲಿ ಏಕೈಕ ಪುತ್ರನಾಗಿದ್ದ ಕಾರ್ತಿಕ್, ಶಿಕ್ಷಣದ ಜೊತೆಗೆ ಬಿಡುವಿನ ವೇಳೆಯಲ್ಲಿ ಸಣ್ಣಪುಟ್ಟ ಕೆಲಸಗಳನ್ನು ನಿರ್ವಹಿಸಿ ಸ್ವಾವಲಂಬಿ ಬದುಕು ಕಟ್ಟಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಗಾಯಗೊಂಡಿರುವ ನೇಹಾ ಹಿರೆಬಂಡಾಡಿ ಗ್ರಾಮದ ನಿವಾಸಿಯಾಗಿದ್ದು, ಕಾಲೇಜಿನ ಅಂತಿಮ ಬಿಎ ವಿದ್ಯಾರ್ಥಿನಿಯಾಗಿದ್ದಾರೆ.

ಈ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

You May Have Missed

error: Content is protected !!