ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

 

ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ.

ಮೃತ ವಿದ್ಯಾರ್ಥಿನಿ ಉಜಿರೆಯ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಶಾಲೆಗೆ ತೆರಳಲು ಸಿದ್ಧವಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಗಮನಿಸಿದಾಗ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ಮಾಹಿತಿ ಪಡೆದ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

 

Leave a Reply

You May Have Missed

error: Content is protected !!