ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ ಸಾಗಾಟ; 4 ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ ಸಾಗಾಟ; 4 ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ ಸಾಗಾಟ; 4 ಆರೋಪಿಗಳ ವಿರುದ್ಧ ಪ್ರಕರಣ ದಾಖಲು

 

ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ ಸಾಗಾಟ; 4 ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಮಾಂಸ ಮಾಡುವ ಉದ್ದೇಶದಿಂದ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿ ನಾಲ್ಕು ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಒಂದು ಪಿಕಪ್ ವಾಹನ ಮತ್ತು ಒಂದು ದನವನ್ನು ವಶಪಡಿಸಿಕೊಂಡಿದ್ದಾರೆ.

ಅಕ್ರಮವಾಗಿ ದನ ಸಾಗಾಟ ಮಾಡುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಜೂ.3 ರಂದು ರಾತ್ರಿ 10:40 ಸುಮಾರಿಗೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕ ಮಂಜು ಶ್ರೀ ಬಸ್ ನಿಲ್ದಾಣದ ಬಳಿ KA-19-J-0831 ಪಿಕಪ್ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ಸಂಬಂಧಪಟ್ಟ ಯಾವುದೇ ಇಲಾಖೆಯಿಂದ ಅನುಮತಿ ಇಲ್ಲದೆ ಅಕ್ರಮವಾಗಿ ಒಂದು ಹೋರಿಯನ್ನು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ.

ಪೊಲೀಸ್ ದಾಳಿ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಬಸ್ ನಿಲ್ದಾಣದಲ್ಲಿ ಅವಿತು ಕುಳಿತ್ತಿದ್ದ ಮತ್ತೊಬ್ಬ ಆರೋಪಿಯನ್ನು ಹಿಡಿದು ವಿಚಾರಿಸಿದಾಗ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೋವುಕಾಡು ನಿವಾಸಿ ಅಂತೋನಿ.ಪಿ.ಜೆ ಮಗ ಸ್ನೇಕ್ ಅನಿಲ್.ಪಿ(43) ಎಂಬುವುದಾಗಿ ತಿಳಿಸಿದ್ದು. ಈ ಹೋರಿಯನ್ನು ತೋಟತ್ತಾಡಿ ನಿವಾಸಿ ತೋಮಸ್ ಮತ್ತು ಕಕ್ಕಿಂಜೆ ನಿವಾಸಿ ಕಬೀರ್ ಎಂಬವರ ಜೊತೆ ಸೇರಿ ದನವನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಕಾನರ್ಪ ನಿವಾಸಿ ರಾಘವೇಂದ್ರ ಭಟ್ ಎಂಬವರಿಂದ ಖರೀದಿಸಿ ಸಾಗಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ.

ಅಕ್ರಮವಾಗಿ ದನ ಸಾಗಾಟ ಮಾಡಿದ ಒಂದು ಪಿಕಪ್ ವಾಹನ ಮತ್ತು ಒಂದು ಹೋರಿಯನ್ನು ಪಂಚರ ಸಮ್ಮುಖದಲ್ಲಿ ಮಹಜರು ನಡೆಸಿ ವಶಪಡಿಸಿಕೊಂಡು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.4 ರಂದು ಸ್ನೇಕ್ ಅನಿಲ್.ಪಿ, ತೋಮಸ್, ಕಬೀರ್, ರಾಘವೇಂದ್ರ ಭಟ್ ವಿರುದ್ಧ ಕಲಂ 5,7,12 ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದೆ.

 

Leave a Reply

You May Have Missed

error: Content is protected !!