ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ

ನೆಲ್ಯಾಡಿ: ನೆಲ್ಯಾಡಿಯ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ 2025–26ನೇ ಸಾಲಿನಲ್ಲಿ ಟ್ರಸ್ಟಿಗಳಾಗಿ ಸೇವೆ ಸಲ್ಲಿಸಿದ ಜೋನ್ಸನ್ ಪುಳಿಕ್ಕಲ್, ರೆಜಿ ಕೊಳಂಗರಾತ್, ಜೋಯ್ ಪುತ್ತೆನ್ ಪರಂಭಿಲ್ ಹಾಗೂ ರಾಜೇಶ್ ತೆಕ್ಕನಾಟ್ ಇವರಿಗೆ ವಿಶೇಷ ಗೌರವ ಸಲ್ಲಿಸಿ ಬೀಳ್ಕೊಡುಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪುಣ್ಯಕ್ಷೇತ್ರದ ಧರ್ಮಗುರು ವಂ.ಫಾ.ಶಾಜಿ ಮಾತ್ಯು, ನಿರ್ಗಮಿತ ಟ್ರಸ್ಟಿಗಳು ತಮ್ಮ ಅವಧಿಯಲ್ಲಿ ಸಮರ್ಪಣಾ ಮನೋಭಾವದಿಂದ ಹಾಗೂ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸಿರುವುದನ್ನು ಶ್ಲಾಘಿಸಿದರು. ಚರ್ಚಿನ ಅಭಿವೃದ್ಧಿ ಹಾಗೂ ಸಮುದಾಯದ ಒಳಿತಿಗಾಗಿ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಪುಣ್ಯಕ್ಷೇತ್ರದ ಭಕ್ತರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!