ಜೂನ್ 13ರಂದು ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಜೂನ್ 13ರಂದು ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಜೂನ್ 13ರಂದು ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕ್ಯಾನ್ಸರ್, ಹೃದ್ರೋಗ ಸೇರಿದಂತೆ ವಿವಿಧ ತಜ್ಞ ವೈದ್ಯರಿಂದ ಉಚಿತ ಪರೀಕ್ಷೆ

 

ಜೂನ್ 13ರಂದು ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕೊಕ್ಕಡ: ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ, ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ಹಾಗೂ ಕೊಕ್ಕಡ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ಜೂನ್ 13ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಮುದಾಯ ಆರೋಗ್ಯ ಕೇಂದ್ರ, ಕೊಕ್ಕಡದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಶಿಬಿರದಲ್ಲಿ ಕ್ಯಾನ್ಸರ್ ತಜ್ಞರು, ಹೃದ್ರೋಗ ತಜ್ಞರು ಸೇರಿದಂತೆ ವಿವಿಧ ವಿಭಾಗಗಳ ಪರಿಣಿತ ವೈದ್ಯರು ಭಾಗವಹಿಸಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಸಲಹೆ ನೀಡಲಿದ್ದಾರೆ.

ಸ್ತನದಲ್ಲಿ ಗೆಡ್ಡೆ ಅಥವಾ ಕಿಬ್ಬೊಟ್ಟೆಯಲ್ಲಿ ಮಾಂಸದ ಮುದ್ದೆಯಂತಹ ಊತ, ಮುಟ್ಟಿನ ಬಳಿಕ ದೀರ್ಘಕಾಲದ ರಕ್ತಸ್ರಾವ ಅಥವಾ ಬಿಳಿ ಮುಟ್ಟು, ಆಗಾಗ ಮರುಕಳಿಸುವ ಕೆಮ್ಮು, ಒರಟು ಧ್ವನಿ, ಆಹಾರ ನುಂಗಲು ಕಷ್ಟವಾಗುವುದು, ಕೆನ್ನೆ ಅಥವಾ ನಾಲಿಗೆಯಲ್ಲಿ ಗುಣವಾಗದ ಹುಣ್ಣು ಅಥವಾ ಬೆಳವಣಿಗೆ, ಅಜೀರ್ಣ, ಹಸಿವು ಕಡಿಮೆಯಾಗುವುದು, ಹೊಟ್ಟೆಯಲ್ಲಿ ಕಸಿವಿಸಿ, ದೇಹದ ತೂಕದಲ್ಲಿ ಗಣನೀಯ ಇಳಿಕೆ, ರಕ್ತಹೀನತೆ, ಆಗಾಗ ಕಾಣುವ ಸೋಂಕುಗಳು, ಮೂಳೆ ನೋವು ಹಾಗೂ ರಕ್ತಸ್ರಾವದ ಕುರುಹುಗಳು ಕಂಡುಬರುವವರು ಶಿಬಿರದ ಪ್ರಯೋಜನ ಪಡೆಯಬಹುದಾಗಿದೆ.

ಇದೇ ವೇಳೆ ಹುಟ್ಟಿನಿಂದ ಬರುವ ಹೃದಯದ ಸಮಸ್ಯೆಗಳು, ಹೃದಯದ ರುಮ್ಯಾಟಿಕ್ ಕಾಯಿಲೆಗಳು, ಹೃದಯದ ಪರಿಧಮನಿಯ ಕಾಯಿಲೆಗಳು ಹಾಗೂ ಬೈಪಾಸ್ ಅಥವಾ ತೆರೆದ ಹೃದಯದ ಶಸ್ತ್ರಚಿಕಿತ್ಸೆಯ ಅಗತ್ಯವಿರುವ ರೋಗಿಗಳಿಗೂ ತಜ್ಞರಿಂದ ಪರಿಶೀಲನೆ ಮತ್ತು ಮಾರ್ಗದರ್ಶನ ದೊರೆಯಲಿದೆ.

ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಸಾರ್ವಜನಿಕರು ಈ ಅಪರೂಪದ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ತುಷಾರ ಅವರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9741881399 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

 

Leave a Reply

You May Have Missed

error: Content is protected !!