ಮಾದೇರಿ ಪ್ರಗತಿಬಂಧು ಸ್ವಸಹಾಯ ಸಂಘದ ಪದಾಧಿಕಾರಿಗಳ ಆಯ್ಕೆ

ಮಾದೇರಿ ಪ್ರಗತಿಬಂಧು ಸ್ವಸಹಾಯ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷ: ಸೆಬಾಸ್ಟಿಯನ್ ಪಿ.ಜೆ
ಕಾರ್ಯದರ್ಶಿ: ಕಮಲಾಕ್ಷ ಗೌಡ

ನೇಸರ ಮಾ.25: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೆಲ್ಯಾಡಿ ಗ್ರಾಮದ ಮಾದೇರಿ ಒಕ್ಕೂಟದ ಸಭೆ ಒಕ್ಕೂಟದ ಅಧ್ಯಕ್ಷೆ ಶ್ರೀಲತಾರವರ ಅಧ್ಯಕ್ಷತೆಯಲ್ಲಿ ಪುಚ್ಚೇರಿ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಸಭೆಯಲ್ಲಿ ನೆಲ್ಯಾಡಿ ವಲಯದ ಮೇಲ್ವಿಚಾರಕ ವಿಜೇಶ್ ಜೈನ್ ಮತ್ತು ಸೇವಾ ಪ್ರತಿನಿದಿ ನಮಿತಾ ಶೆಟ್ಟಿ ಯವರ ನೇತೃತ್ವದಲ್ಲಿ ಮುಂದಿನ 3 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೆಲ್ಯಾಡಿ ಗ್ರಾಮದ ಮಾದೇರಿ ಒಕ್ಕೂಟದ ಅಧ್ಯಕ್ಷರಾಗಿ ಮಾತಾಕೃಪಾ ಸ್ವಸಹಾಯ ಸಂಘದ ಪ್ರಬಂಧಕ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಸೆಬಾಸ್ಟಿಯನ್ ಪಿ.ಜೆ.ಮಾದೇರಿ ಹಾಗೂ ಕಾರ್ಯದರ್ಶಿಯಾಗಿ ಕಮಲಾಕ್ಷ ಗೌಡ, ಉಪಾಧ್ಯಕ್ಷರಾಗಿ ಲಕ್ಷ್ಮಣ ಗೌಡ ಇಚ್ಚೂರು, ಜತೆ ಕಾರ್ಯದರ್ಶಿಯಾಗಿ ಪ್ರಿಯಾ ಕೊಪ್ಪ, ಕೋಶಾಧಿಕಾರಿಯಾಗಿ ಪ್ರಶಾಂತ್ ಕುಮಾರ್‌ರವರನ್ನು ಹಾಗೂ ಉಪಸಮಿತಿಗೆ 5 ಸದಸ್ಯರನ್ನು ಮತ್ತು ದಾಖಲಾತಿ ಸಮಿತಿಗೆ 5 ಸದಸ್ಯರನ್ನು ಆಯ್ಕೆ ಮಾಡಲಾಯಿತು.

ವೀಕ್ಷಿಸಿ Subscribers ಮಾಡಿ

Leave a Reply

You May Have Missed

error: Content is protected !!