ಇಚ್ಲಂಪಾಡಿ: ಕುಮಾರಧಾರ ಹೊಳೆಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

ನೆಲ್ಯಾಡಿ: ಇಚ್ಲಂಪಾಡಿ ಸಮೀಪ ಹರಿಯುವ ಕುಮಾರಧಾರ ಹೊಳೆಯಲ್ಲಿ ಮಂಗಳವಾರ ಮಧ್ಯಾಹ್ನ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಹಾಗೂ ಪ್ರಯಾಣಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕಳೆದ ಮೂರು-ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುವುದರಿಂದ ಹೊಳೆಯಲ್ಲಿ ನೀರಿನ ಮಟ್ಟ ಸಂಪೂರ್ಣ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೊಳೆಯ ಮಧ್ಯದಲ್ಲಿರುವ ಬಂಡೆಕಲ್ಲಿನ ಮೇಲೆ ಬೃಹತ್ ಗಾತ್ರದ ಮೊಸಳೆಯೊಂದು ಬಿಸಿಲು ಕಾಯಿಸುತ್ತಿರುವುದು ಸಾರ್ವಜನಿಕರ ಕಣ್ಣಿಗೆ ಬಿದ್ದಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಹಾಗೂ ಸ್ಥಳೀಯರು ವಾಹನಗಳನ್ನು ನಿಲ್ಲಿಸಿ ಮೊಸಳೆಯನ್ನು ವೀಕ್ಷಿಸುತ್ತಿರುವ ದೃಶ್ಯ ಕಂಡುಬಂತು. ಕೆಲವರು ಮೊಬೈಲ್‌ಗಳಲ್ಲಿ ಚಿತ್ರ ಹಾಗೂ ವಿಡಿಯೊಗಳನ್ನು ಸೆರೆಹಿಡಿದರು.

ಮೊಸಳೆ ಕಂಡುಬಂದಿರುವ ಸ್ಥಳದ ಎರಡೂ ಬದಿಗಳಲ್ಲಿ ಮನೆಗಳು ಹಾಗೂ ಕೃಷಿ ತೋಟಗಳಿದ್ದು, ನಿತ್ಯವೂ ಜನರು ಹೊಳೆಯ ಸಮೀಪ ಓಡಾಡುತ್ತಾರೆ. ಕೃಷಿ ಚಟುವಟಿಕೆಗಳಿಗೆ ಹಾಗೂ ಇತರ ಕೆಲಸಗಳಿಗಾಗಿ ಹೊಳೆಯತ್ತ ತೆರಳುವವರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ವಿಶೇಷವಾಗಿ ಮಕ್ಕಳು ಹಾಗೂ ಸಾಕುಪ್ರಾಣಿಗಳು ಹೊಳೆಯ ಸಮೀಪ ಹೋಗದಂತೆ ಪಾಲಕರು ಗಮನಹರಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

Leave a Reply

You May Have Missed

error: Content is protected !!