ರಿಕ್ಷಾ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಚಾಲಕ

ರಿಕ್ಷಾ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಚಾಲಕ

ನೇಸರ ಮಾ.25: ರಾಷ್ಟ್ರೀಯ ಹೆದ್ದಾರಿ 73ರ ಮುಂಡಾಜೆ ಗ್ರಾಮದ ಸೀಟು ಬಸ್ ಸ್ಟಾಪ್ ಬಳಿ, ಚಾರ್ಮಾಡಿ ಕಡೆಯಿಂದ ಉಜಿರೆಯ ಕಡೆ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ.25 ರಂದು ನಡೆದಿದೆ.

ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು, ಮೊದಲು ರಿಕ್ಷಾಕ್ಕೆ ಡಿಕ್ಕಿಯಾಗಿ ಬಳಿಕ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಕಾರು ಡಿಕ್ಕಿ ಹೊಡೆದ ವಿದ್ಯುತ್ ಕಂಬದ ಸಮೀಪ ಬಸ್ ಸ್ಟಾಪ್ ಇದ್ದು, ಇಲ್ಲಿನ ರಸ್ತೆಯಲ್ಲಿ ವಾಹನಗಳನ್ನು ನಿರೀಕ್ಷಿಸುವ ಅನೇಕ ಪ್ರಯಾಣಿಕರು ನಿಂತಿರುತ್ತಾರೆ. ಆದರೆ ಘಟನೆಯ ವೇಳೆ ಯಾರು ಇಲ್ಲದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ.

ವೀಕ್ಷಿಸಿ Subscribers ಮಾಡಿ

 

—ಜಾಹೀರಾತು—

Leave a Reply

You May Have Missed

error: Content is protected !!