ಕಡಬ: ಉಚಿತ ಕಣ್ಣು ಹಾಗೂ ಆರೋಗ್ಯ ತಪಾಸಣಾ ಶಿಬಿರ: 203 ಮಂದಿಗೆ ತಪಾಸಣೆ, 83 ಮಂದಿಗೆ ಉಚಿತ ಕನ್ನಡಕ ವಿತರಣೆ

ಕಡಬ: ಉಚಿತ ಕಣ್ಣು ಹಾಗೂ ಆರೋಗ್ಯ ತಪಾಸಣಾ ಶಿಬಿರ: 203 ಮಂದಿಗೆ ತಪಾಸಣೆ, 83 ಮಂದಿಗೆ ಉಚಿತ ಕನ್ನಡಕ ವಿತರಣೆ

ಕಡಬ: ಉಚಿತ ಕಣ್ಣು ಹಾಗೂ ಆರೋಗ್ಯ ತಪಾಸಣಾ ಶಿಬಿರ: 203 ಮಂದಿಗೆ ತಪಾಸಣೆ, 83 ಮಂದಿಗೆ ಉಚಿತ ಕನ್ನಡಕ ವಿತರಣೆ

 

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ, ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಹಾಗೂ ಕಡಬ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಹಕಾರದೊಂದಿಗೆ ಉಚಿತ ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ತಪಾಸಣಾ ಶಿಬಿರವು ಕಡಬ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ದುರ್ಗಾಂಬಿಕಾ ದೇವಸ್ಥಾನದ ಅಧ್ಯಕ್ಷ ಚಂದ್ರಶೇಖರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದ ಮಾತನಾಡಿದ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮನುಷ್ಯನ ದೇಹದ ಪ್ರಮುಖ ಅಂಗಗಳಲ್ಲಿ ಕಣ್ಣು ಅತ್ಯಂತ ಅಮೂಲ್ಯವಾಗಿದ್ದು, ಅದರ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಇಂತಹ ಉಚಿತ ತಪಾಸಣಾ ಶಿಬಿರಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಲಲಿತಾ ಮಾತನಾಡಿ, ಕಣ್ಣು ಇಲ್ಲದಿದ್ದರೆ ಪ್ರಪಂಚವೇ ಕತ್ತಲೆಯಾಗುತ್ತದೆ. ಆದ್ದರಿಂದ ಕಣ್ಣಿನ ಯಾವುದೇ ಸಮಸ್ಯೆಯನ್ನು ನಿರ್ಲಕ್ಷಿಸದೆ ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ವೆನ್ಲಾಕ್ ಆಸ್ಪತ್ರೆಯಲ್ಲಿ ಲಭ್ಯವಿರುವ ವಿವಿಧ ಆರೋಗ್ಯ ಸೇವೆಗಳ ಕುರಿತು ಮಾಹಿತಿ ನೀಡಿದರು.

ಪ್ರಗತಿಬಂಧು ಒಕ್ಕೂಟದ ವಲಯಾಧ್ಯಕ್ಷ ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವೆನ್ಲಾಕ್ ಆಸ್ಪತ್ರೆಯ ಪ್ರಯೋಗಾಲಯ ತಂತ್ರಜ್ಞ ಸುಮನ, ಕಡಬ ವೈದ್ಯಾಧಿಕಾರಿ ಡಾ. ಮಂಜುನಾಥ್, ಕಡಬ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಣಾಧಿಕಾರಿ ಜೇಸಿಂತ ಹಾಗೂ ಜ್ಞಾನವಿಕಾಸ ಸಂಯೋಜಕಿ ಹೇಮಲತಾ ಉಪಸ್ಥಿತರಿದ್ದರು.

ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಹಾಗೂ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿ ಶಿಬಿರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಶಿಬಿರದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ಹಾಗೂ ಸ್ಥಳೀಯರು ಸೇರಿದಂತೆ ಒಟ್ಟು 203 ಮಂದಿ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ಮಾಡಿಸಿಕೊಂಡಿದ್ದು, 83 ಮಂದಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಯಶಸ್ಸಿಗೆ ವಲಯದ ಸೇವಾ ಪ್ರತಿನಿಧಿಗಳಾದ ಸವಿತಾ, ಸುಗುಣ, ಸರಿತಾ, ದುರ್ಗಾವತಿ, ಜಯಲಕ್ಷ್ಮಿ ಹಾಗೂ ಸಂಧ್ಯಾ ಸಹಕರಿಸಿದರು. ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ನಳಿನಿ ವಂದಿಸಿದರು.

 

Leave a Reply

You May Have Missed

error: Content is protected !!