ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

 

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ(85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜುಲೈ 18) ಸಂಜೆ 4:50 ರ ಸುಮಾರಿಗೆ ವಿಧಿವಶರಾಗಿದ್ದಾರೆ.

ಉಸಿರಾಟದ ಸಮಸ್ಯೆಯಿಂದಾಗಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರು ಚೆನ್ನಮ್ಮನವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.

ಪತಿ ಹೆಚ್‌.ಡಿ ದೇವೇಗೌಡ, ಪುತ್ರ ಹೆಚ್‌.ಡಿ ಕುಮಾರಸ್ವಾಮಿ, ಹೆಚ್​​.ಡಿ. ರೇವಣ್ಣ, ಹೆಚ್.ಡಿ.ಬಾಲಕೃಷ್ಣ, ಹೆಚ್​​.ಡಿ. ರಮೇಶ್​​ ಗೌಡ, ಶೈಲಜಾ ಹಾಗೂ ಅನಸೂಯಾ ಸೇರಿ ಒಟ್ಟು ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಆಸ್ಪತ್ರೆ ಪ್ರಕ್ರಿಯೆಗಳು ಮುಗಿದ ಬಳಿಕ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಪಾರ್ಥೀವ ಶರೀರ ತೆಗೆದುಕೊಂಡು ಹೋಗಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

 

Leave a Reply

You May Have Missed

error: Content is protected !!