ಕಡಬ: ಪೋಕ್ಸೊ ಆರೋಪದಡಿ ಕಡಬದ ಯುವಕನ ಬಂಧನ

ಕಡಬ: ಪೋಕ್ಸೊ ಆರೋಪದಡಿ ಯುವಕ ಬಂಧನ

ಕಡಬ: ಪೋಕ್ಸೊ ಆರೋಪದಡಿ ಕಡಬದ ಯುವಕನ ಬಂಧನ

 

ಸುಳ್ಯ: ಠಾಣಾ ವ್ಯಾಪ್ತಿಯಿಂದ ಮೇ 7ರಂದು ಅಪ್ರಾಪ್ತ ವಯಸ್ಸಿನ ಬಾಲಕಿ ಮಂಗಳೂರಿಗೆ ಕೆಲಸಕ್ಕಾಗಿ ಹೋಗುತ್ತಿರುವುದಾಗಿ ಹೇಳಿ ಮನೆಯಿಂದ ತೆರಳಿದ್ದಳು. ಬಳಿಕ ಆಕೆ ಮನೆಗೆ ಹಿಂತಿರುಗದೇ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬದವರು ಮೇ 11ರಂದು ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಮುಂದುವರಿಸಿದ ಸುಳ್ಯ ಪೊಲೀಸರು ಕಾಣೆಯಾಗಿದ್ದ ಬಾಲಕಿಯನ್ನು ಜುಲೈ 22ರಂದು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲಕಿ ನೀಡಿದ ಹೇಳಿಕೆಯ ಪ್ರಕಾರ, ಕಡಬ ನಿವಾಸಿಯಾದ ಧನುಷ್(18) ಎಂಬಾತನು ತನ್ನನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾಳೆ.

ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 64(2)(m) ಹಾಗೂ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕಾಯ್ದೆ (ಪೋಕ್ಸೊ)ಯ ಕಲಂ 5(l) ಮತ್ತು 6 ಅನ್ನು ಹೆಚ್ಚುವರಿಯಾಗಿ ಅಳವಡಿಸಲಾಗಿದೆ.

ಆರೋಪಿತ ಧನುಷ್‌ನನ್ನು ಜುಲೈ 22ರಂದು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

CALL NOW 8606485844

 

Leave a Reply

You May Have Missed

error: Content is protected !!