ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯ ಪೆರ್ನೆಯ ಮೈರಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಮಗು ಸೇರಿದಂತೆ ಐವರು ಗಾಯಗೊಂಡ ಘಟನೆ ಜು.28ರಂದು ನಡೆದಿದೆ.

ಗಾಯಗೊಂಡವರನ್ನು ಕಾರಿನ ಚಾಲಕ ಮೊಹಮ್ಮದ್ ಫಾರೂಕ್ (31), ಪ್ರಯಾಣಿಕರಾದ ಫಾತಿಮತ್ ತಸ್ಪಿಯಾ (25), ಜುಲೈಕಾ (52), ಮಹಮ್ಮದ್ ಅಫ್ವಾನ್ (15) ಹಾಗೂ ಮಹಮ್ಮದ್ ಇಲ್ಹಾನ್ (4) ಎಂದು ಗುರುತಿಸಲಾಗಿದೆ. ಗಾಯಾಳುಗಳು ಮೂಲತಃ ಫರಂಗಿಪೇಟೆಯ ನಿವಾಸಿಗಳಾಗಿದ್ದು, ಫರಂಗಿಪೇಟೆಯಿಂದ ಉಪ್ಪಿನಂಗಡಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಪೆರ್ನೆಯ ಮೈರಕಟ್ಟೆ ಬಳಿ ಹೆದ್ದಾರಿ ಬದಿಯಲ್ಲಿ ಟಿಪ್ಪರ್ ಲಾರಿಯೊಂದು ನಿಂತಿದ್ದ ವೇಳೆ, ಹಿಂದಿನಿಂದ ಬಂದ ಕಾರು ನಿಯಂತ್ರಣ ತಪ್ಪಿ ಟಿಪ್ಪರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ.

ಈ ಸಂಬಂಧ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!