ನೆಲ್ಯಾಡಿ: ಎಸ್‌ಟಿಜಿ ನರ್ಸಿಂಗ್ ಕಾಲೇಜಿನಿಂದ ಸಾರ್ವಜನಿಕರಿಗೆ ಆರೋಗ್ಯ ಅರಿವು ಕಾರ್ಯಕ್ರಮ

ನೆಲ್ಯಾಡಿ: ವಿಶ್ವ ಹೆಪಟೈಟಿಸ್ ದಿನ ಹಾಗೂ ವಿಶ್ವ ಒಆರ್‌ಎಸ್ ದಿನದ ಅಂಗವಾಗಿ ಎಸ್‌ಟಿಜಿ ಶಿಕ್ಷಣ ಸಂಸ್ಥೆಯ ಅಂಗಸಂಸ್ಥೆಯಾದ ಎಸ್‌ಟಿಜಿ ನರ್ಸಿಂಗ್ ಕಾಲೇಜಿನ ವತಿಯಿಂದ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹೆಪಟೈಟಿಸ್ ರೋಗದ ಲಕ್ಷಣಗಳು, ಸೋಂಕು ಹರಡುವ ವಿಧಾನಗಳು ಹಾಗೂ ತಡೆಗಟ್ಟುವ ಕ್ರಮಗಳ ಕುರಿತು ಕಿರುನಾಟಕದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಅಲ್ಲದೆ, ಕೈತೊಳೆಯುವಿಕೆಯ ಮಹತ್ವವನ್ನು ಸಾರುವ ಸಂದೇಶ ಫಲಕಗಳೊಂದಿಗೆ ಆಕರ್ಷಕ ನೃತ್ಯ ಪ್ರದರ್ಶಿಸುವ ಮೂಲಕ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದರು.

ಇದೇ ವೇಳೆ ಮನೆಯಲ್ಲಿಯೇ ಒಆರ್‌ಎಸ್ ದ್ರಾವಣವನ್ನು ಸರಳವಾಗಿ ತಯಾರಿಸುವ ವಿಧಾನ ಹಾಗೂ ಅದನ್ನು ಸರಿಯಾದ ರೀತಿಯಲ್ಲಿ ಬಳಸುವ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಅತಿಸಾರದಿಂದ ಉಂಟಾಗುವ ನಿರ್ಜಲೀಕರಣವನ್ನು ತಡೆಯುವಲ್ಲಿ ಒಆರ್‌ಎಸ್‌ನ ಮಹತ್ವವನ್ನು ವಿವರಿಸಿ, ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ವಿದ್ಯಾರ್ಥಿಗಳು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಎಸ್‌ಟಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರಶಾಂತ್ ಚಾಕೋ, ಎಸ್‌ಟಿಜಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಮನು ಎಂ., ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಿಶಿರಾ ಎಂ.ಪಿ. ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!