ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
0 Comments
ನೆಲ್ಯಾಡಿ: ನಿಲ್ಲಿಸಿದ್ದ ಲಾರಿಯಿಂದ 400 ಲೀಟರ್ ಡೀಸೆಲ್ ಕಳವು – ಹೆದ್ದಾರಿಯಲ್ಲಿ ಕಳ್ಳತನಕ್ಕೆ ಚಾಲಕರ ಆತಂಕ











ನೆಲ್ಯಾಡಿ: ನೆಲ್ಯಾಡಿ ನಿವಾಸಿ ಸಾದಿಕ್ ಅವರು ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಲಾರಿಯಲ್ಲಿ ಸರಕು ಸಾಗಿಸುತ್ತಿದ್ದು, ರಾತ್ರಿ ಸುಮಾರು 3 ಗಂಟೆಯ ವೇಳೆಗೆ ತಮ್ಮ ಲಾರಿಯನ್ನು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಪೇಟೆ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಿ, ಸಮೀಪದಲ್ಲಿರುವ ತಮ್ಮ ಮನೆಗೆ ಅರ್ಧ ಗಂಟೆ ಹೊತ್ತಿಗೆ ತೆರಳಿದ್ದರು. ಮನೆಗೆ ಹೋಗಿ ಮರಳಿ ಲಾರಿಗೆ ಬಂದಾಗ ಲಾರಿ ಇಂಜಿನ್ ಚಾಲನೆಯಾಗದೇ ಇದ್ದ ಕಾರಣ ಅನುಮಾನಗೊಂಡು ಡೀಸೆಲ್ ಮೀಟರ್ ಪರಿಶೀಲಿಸಿದಾಗ ಟ್ಯಾಂಕ್ ಸಂಪೂರ್ಣ ಖಾಲಿಯಾಗಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಲಾರಿಯಿಂದ ಇಳಿದು ಪರಿಶೀಲಿಸಿದಾಗ ಡೀಸೆಲ್ ಟ್ಯಾಂಕ್‌ನ ಮುಚ್ಚಳವನ್ನು ಮೀಟಿ ತುಂಡು ಮಾಡಿ ತೆರವುಗೊಳಿಸಿ, ಅದರಲ್ಲಿದ್ದ ಸುಮಾರು 400 ಲೀಟರ್ ಡೀಸೆಲ್ ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಸಾದಿಕ್ ಅವರು ಉಪ್ಪಿನಂಗಡಿ ಪೊಲೀಸರಿಗೆ ತಿಳಿಸಿದ್ದಾರೆ.
ಘಟನೆಯ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಾದಿಕ್, “ಕೇವಲ ಅರ್ಧ ಗಂಟೆ ಮನೆಗೆ ಹೋಗಿ ಬರುವಷ್ಟರಲ್ಲಿ ಟ್ಯಾಂಕ್‌ನಲ್ಲಿದ್ದ ಸಂಪೂರ್ಣ ಡೀಸೆಲ್ ಕಳವಾಗಿದೆ. ಲಾರಿ ಸ್ಟಾರ್ಟ್ ಆಗದೇ ಇದ್ದಾಗಲೇ ಅನುಮಾನ ಬಂದು ಪರಿಶೀಲಿಸಿದಾಗ ಟ್ಯಾಂಕ್ ಮುಚ್ಚಳವನ್ನು ಒಡೆದು ಡೀಸೆಲ್ ಕಳವು ಮಾಡಿರುವುದು ಗೊತ್ತಾಯಿತು. ಹೆದ್ದಾರಿಯಲ್ಲಿ ಲಾರಿಗಳನ್ನು ನಿಲ್ಲಿಸುವುದೇ ಈಗ ಭಯವಾಗುತ್ತಿದೆ,” ಎಂದು ತಮ್ಮ ಅಳಲನ್ನು ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯದಿಂದ ಮಾಣಿವರೆಗೆ ಹಲವು ಕಡೆಗಳಲ್ಲಿ ಇದೇ ರೀತಿಯ ಕಳ್ಳತನಗಳು ನಿರಂತರವಾಗಿ ನಡೆಯುತ್ತಿವೆ. ರಾತ್ರಿ ವೇಳೆ ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿ ವಿಶ್ರಾಂತಿ ಪಡೆಯುವಾಗ ಅಥವಾ ಸಮೀಪದ ಮನೆಗಳಿಗೆ ತೆರಳುವ ಅಲ್ಪ ಸಮಯದಲ್ಲೇ ಕಳ್ಳರು ಡೀಸೆಲ್ ಮತ್ತು ಬ್ಯಾಟರಿಗಳನ್ನು ಕಳವು ಮಾಡುತ್ತಿರುವ ಘಟನೆಗಳು ಮರುಕಳಿಸುತ್ತಿವೆ. ಈ ಹಿಂದೆ ಕೂಡ ಇಂತಹ ಹಲವು ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದರೂ, ಅನೇಕ ಚಾಲಕರು ಮತ್ತು ವಾಹನ ಮಾಲೀಕರು ದೂರು ನೀಡಲು ಹಿಂದೇಟು ಹಾಕುತ್ತಿದ್ದಾರೆ. ಕಾರಣ, ಪ್ರಕರಣ ದಾಖಲಿಸಿದರೆ ಲಾರಿಯನ್ನು ಎರಡು ಅಥವಾ ಮೂರು ದಿನಗಳ ಕಾಲ ಠಾಣೆ ವ್ಯಾಪ್ತಿಯಲ್ಲಿ ಇರಿಸಬೇಕಾಗುವ ಸಾಧ್ಯತೆ ಇದೆ. ದೂರದ ಜಿಲ್ಲೆ ಹಾಗೂ ರಾಜ್ಯಗಳಿಂದ ಸರಕು ಸಾಗಣೆ ಮಾಡುವ ವಾಹನಗಳಿಗೆ ಇದರಿಂದ ದೊಡ್ಡ ತೊಂದರೆ ಉಂಟಾಗುತ್ತದೆ. ವಿಶೇಷವಾಗಿ ಹಾಳಾಗುವ ಸ್ವಭಾವದ ಸರಕುಗಳಿದ್ದರೆ ಹೆಚ್ಚಿನ ನಷ್ಟವನ್ನು ಎದುರಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಹಲವರು ಕಳ್ಳತನವಾದರೂ ಮೌನ ವಹಿಸುತ್ತಿದ್ದಾರೆ ಎಂದು ಲಾರಿ ಚಾಲಕರುಗಳು ಆತಂಕ ಮತ್ತು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.



















Leave a Reply