ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
0 Comments
ರೆಖ್ಯ: ಕಾಡಾನೆ ದಾಳಿಗೆ ಕಾರ್ಮಿಕ ಬಾಲಕೃಷ್ಣ ಗೌಡ ಬಲಿ; ಮೃತದೇಹ ಪತ್ತೆ, ಸ್ಥಳದಲ್ಲಿ ಅಧಿಕಾರಿಗಳ ಪರಿಶೀಲನೆ










ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕರೊಬ್ಬರು ಬಲಿಯಾದ ದಾರುಣ ಘಟನೆ ಶನಿವಾರ ಸಂಜೆ ನಡೆದಿದೆ. ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ.
ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸ ಮುಗಿಸಿ ಸಂಜೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಕಾಡಾನೆ ದಾಳಿಗೆ ಒಳಗಾಗಿರುವ ಶಂಕೆ ವ್ಯಕ್ತವಾಗಿ. ಅವರು ರಾತ್ರಿ ವೇಳೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ಆರಂಭಿಸಿದರು.
ಹುಡುಕಾಟದ ವೇಳೆ ಅವರು ಧರಿಸಿದ್ದ ಪ್ಲಾಸ್ಟಿಕ್ ರೈನ್‌ಕೋಟ್ ದಾರಿಯ ಮಧ್ಯೆ ಬಿದ್ದಿರುವುದು ಕಂಡುಬಂದಿದ್ದು, ಅದರ ಸಮೀಪದಲ್ಲೇ ಕಾಡಾನೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಇದರಿಂದ ಕಾಡಾನೆ ದಾಳಿ ನಡೆಸಿರುವ ಅನುಮಾನ ಬಲಗೊಂಡಿತ್ತು. ಬಳಿಕ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ ಶೋಧ ಕಾರ್ಯ ನಡೆಸಿದಾಗ ಸಮೀಪದ ಕಣಿಯೊಂದರಲ್ಲಿ ಬಾಲಕೃಷ್ಣ ಗೌಡ ಅವರ ಮೃತದೇಹ ಪತ್ತೆಯಾಯಿತು.
ಭಾನುವಾರದಂದು ಘಟನಾ ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಚ್.ಪಿ., ಉಪವಲಯ ಅರಣ್ಯಾಧಿಕಾರಿಗಳು, ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಗಾಣಿಗೇರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರಸಿನಮಕ್ಕಿ–ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ ಹಾಗೂ ಸದಸ್ಯರು ಸದಸ್ಯರು, ಸ್ಥಳೀಯ ಸಾರ್ವಜನಿಕರು ಸ್ಥಳದಲ್ಲಿ ಬೀಡು ಬಿಟ್ಟಿದ್ದು.
ಮೃತದೇಹವನ್ನು ಸ್ಥಳದಲ್ಲೇ ಮಹಜರು ನಡೆಸಿ. ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ರವಾನಿಸಲಾಗಿದೆ. ಘಟನೆ ಕುರಿತು ಅರಣ್ಯ ಇಲಾಖೆ ಹಾಗೂ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.



















Leave a Reply