ದ.ಕ. ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.3ರಂದು ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದ.ಕ.ದಲ್ಲಿ ಆ.3ರಂದು ಶಾಲೆ, ಪಿಯುಸಿ, ಐಟಿಐ, ಡಿಪ್ಲೊಮಾಗಳಿಗೆ ರಜೆ ಘೋಷಣೆ

ದ.ಕ. ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.3ರಂದು ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ

 

ದ.ಕ.ದಲ್ಲಿ ಆ.3ರಂದು ಶಾಲೆ, ಪಿಯುಸಿ, ಐಟಿಐ, ಡಿಪ್ಲೊಮಾಗಳಿಗೆ ರಜೆ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮುಂದುವರಿದಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಸ್ಟ್ 3, 2026 (ಸೋಮವಾರ) ರಂದು ಜಿಲ್ಲೆಯ ವಿವಿಧ ತಾಲೂಕುಗಳ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಆದೇಶದ ಪ್ರಕಾರ, ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳಲ್ಲಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (10ನೇ ತರಗತಿವರೆಗೆ) ಹಾಗೂ ಎಲ್ಲಾ ವಸತಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇನ್ನು ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ (12ನೇ ತರಗತಿವರೆಗೆ) ಹಾಗೂ ಎಲ್ಲಾ ವಸತಿ ಶಾಲಾ–ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.

ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ–2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

 

Leave a Reply

You May Have Missed

error: Content is protected !!