ನೆಲ್ಯಾಡಿ: ಶಿರಾಡಿ ಹೊರಠಾಣೆ ಮೇಲ್ದರ್ಜೆಗೇರಿಸಲು ಕಸರತ್ತು: 2023ರಿಂದ ಅಪರಾಧ ಪ್ರಕರಣಗಳ ಸಮಗ್ರ ಮಾಹಿತಿ ಸಂಗ್ರಹ
ಉಪ್ಪಿನಂಗಡಿ, ಕಡಬ, ಧರ್ಮಸ್ಥಳ ಠಾಣೆಗಳ ವ್ಯಾಪ್ತಿಯ ಗ್ರಾಮಗಳ ಪ್ರಕರಣಗಳ ವಿವರ ಕೋರಿಕೆ | ಜನಸಂಖ್ಯೆ, ಪ್ರಕರಣಗಳ ಸಂಖ್ಯೆ, ಠಾಣೆ ವ್ಯಾಪ್ತಿ ಬದಲಾವಣೆಯ ಮಾಹಿತಿಗೂ ಒತ್ತು
ನೆಲ್ಯಾಡಿ: ನೆಲ್ಯಾಡಿಯಲ್ಲಿ ಶಿರಾಡಿ ಹೊರ ಠಾಣೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ, ಕಡಬ, ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಶಿರಾಡಿ ಹೊರ ಠಾಣೆಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಕುರಿತು ಸಮಗ್ರ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಸಂಗ್ರಹಿಸಲಾಗುತ್ತಿದೆ.
ನೆಲ್ಯಾಡಿಯಲ್ಲಿ ಶಿರಾಡಿ ಭಾಗದ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸುತ್ತಮುತ್ತಲಿನ ಗ್ರಾಮಗಳ ಅಪರಾಧ ಪ್ರಕರಣಗಳ ಸ್ವರೂಪ, ಪ್ರಕರಣಗಳ ಸಂಖ್ಯೆ, ಜನಸಂಖ್ಯೆ ಹಾಗೂ ಪ್ರಸ್ತುತ ಪೊಲೀಸ್ ಠಾಣೆಗಳ ವ್ಯಾಪ್ತಿಯ ವಿವರಗಳನ್ನು ಒಟ್ಟುಗೂಡಿಸಲಾಗುತ್ತಿದೆ. ಇದಕ್ಕಾಗಿ 2023, 2024, 2025 ಹಾಗೂ 2026ನೇ ಸಾಲಿನ ಇಲ್ಲಿಯವರೆಗಿನ ಪ್ರಕರಣಗಳ ಮಾಹಿತಿಯನ್ನು ಪ್ರತ್ಯೇಕವಾಗಿ ದಾಖಲಿಸುವ ವ್ಯವಸ್ಥೆ ಮಾಡಲಾಗಿದೆ.
ಸಂಗ್ರಹಿಸಲಾಗುತ್ತಿರುವ ಮಾಹಿತಿಯಲ್ಲಿ ಭಾರತೀಯ ದಂಡ ಸಂಹಿತೆ/ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳು, ಅಪರಾಧ ಪ್ರಕ್ರಿಯಾ ಸಂಹಿತೆ/ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ವ್ಯಾಪ್ತಿಯ ಪ್ರಕರಣಗಳು, ವಿಶೇಷ ಮತ್ತು ಸ್ಥಳೀಯ ಕಾಯ್ದೆಗಳಡಿ ದಾಖಲಾಗಿರುವ ಪ್ರಕರಣಗಳು, ನಾಪತ್ತೆ ಪ್ರಕರಣಗಳು, ಅಸ್ವಾಭಾವಿಕ ಸಾವು ಪ್ರಕರಣಗಳು ಹಾಗೂ ಸಣ್ಣಪುಟ್ಟ ಪ್ರಕರಣಗಳ ವಿವರಗಳನ್ನು ಒಳಗೊಂಡಿದೆ. ಇದರೊಂದಿಗೆ ಸಂಬಂಧಪಟ್ಟ ಗ್ರಾಮಗಳ ಜನಸಂಖ್ಯೆಯ ಮಾಹಿತಿಯನ್ನೂ ಪರಿಗಣಿಸಲಾಗುತ್ತಿದೆ. ಕಡಬ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಟ್ಟು 19 ಗ್ರಾಮಗಳ ವಿವರಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತಿದೆ. ಇದರಲ್ಲಿ ಕಡಬ, ಬಿಳಿನೆಲೆ, ಕೊಂಬಾರು, ನೂಜಿಬಾಳ್ತಿಲ, ಆಲಂಕಾರು, ರಾಮಕುಂಜ, ಕೊಯಿಲ, ಹಳಿನೇರಂಕಿ, ಕುಟ್ರುಪಾಡಿ, 102 ನೆಕ್ಕಿಲಾಡಿ, ಕೊಡಿಯಂಬಾಳ, ಗೋಳ್ತಾಡಿ, ರೆಂಜಿಲಾಡಿ, ಬಂಟ್ರ, ಇಚ್ಲೂರು, ಬಲ್ಯ, ಕುಂತೂರು, ಪೆರಾಜೆ ಹಾಗೂ ಚಾರ್ವಾಕ ಮೊದಲಾದ ಗ್ರಾಮಗಳ ಮಾಹಿತಿಯನ್ನು ದಾಖಲಿಸುವ ವ್ಯವಸ್ಥೆ ಮಾಡಲಾಗಿದೆ.
ಅದೇ ರೀತಿ ಧರ್ಮಸ್ಥಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಒಟ್ಟು 18 ಗ್ರಾಮಗಳ ಮಾಹಿತಿಯನ್ನೂ ಸಂಗ್ರಹಿಸಲಾಗುತ್ತಿದೆ. ಧರ್ಮಸ್ಥಳ, ಬೆಳಾಲು, ಚಿಬಿದ್ರೆ, ಚಾರ್ಮಾಡಿ, ರೆಖ್ಯ, ಶಿಬಾಜೆ, ಕೊಕ್ಕಡ, ಶಿಶಿಲ ಸೇರಿದಂತೆ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ಅಪರಾಧ ಮತ್ತು ಜನಸಂಖ್ಯಾ ವಿವರಗಳನ್ನು ದಾಖಲಿಸಲಾಗುತ್ತಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಗ್ರಾಮಗಳ ವಿವರಗಳನ್ನೂ ಇದೇ ಮಾದರಿಯಲ್ಲಿ ಪರಿಶೀಲಿಸಲಾಗುತ್ತಿದೆ. ನೆಲ್ಯಾಡಿ, ಕೊಕ್ಕಡ, ಇಚ್ಲಂಪಾಡಿ, ಶಿರಾಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ದಾಖಲಾಗಿರುವ ಪ್ರಕರಣಗಳ ಸ್ವರೂಪವನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ.
ನೆಲ್ಯಾಡಿಯಲ್ಲಿ ಶಿರಾಡಿ ಹೊರ ಠಾಣೆಯನ್ನು ಮೇಲ್ದರ್ಜೆಗೇರಿಸುವ ಸಂದರ್ಭದಲ್ಲಿ ಪ್ರಸ್ತುತ ಪೊಲೀಸ್ ಠಾಣೆಗಳ ವ್ಯಾಪ್ತಿಯಿಂದ ಯಾವ ಗ್ರಾಮಗಳನ್ನು ಹೊಸ ಠಾಣೆಯ ವ್ಯಾಪ್ತಿಗೆ ಸೇರಿಸಬಹುದು ಎಂಬುದರ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಹೊಸ ಠಾಣೆ ಅಥವಾ ಮೇಲ್ದರ್ಜೆಗೇರಿಸಿದ ಠಾಣೆಯ ವ್ಯಾಪ್ತಿ ನಿಗದಿಪಡಿಸುವ ಸಂದರ್ಭದಲ್ಲಿ ಪ್ರಸ್ತುತ ಠಾಣೆಗಳ ಗಡಿ, ಬೀಟ್ ವ್ಯವಸ್ಥೆ ಹಾಗೂ ಸಿಬ್ಬಂದಿ ನಿರ್ವಹಣೆಯಲ್ಲಿ ಅಗತ್ಯವಿರುವ ಬದಲಾವಣೆಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸುವಂತೆ ಸೂಚಿಸಲಾಗಿದೆ.
ಪ್ರಮುಖವಾಗಿ, ಕೇವಲ ಅಪರಾಧ ಪ್ರಕರಣಗಳ ಸಂಖ್ಯೆಯನ್ನಷ್ಟೇ ಆಧಾರವಾಗಿಸದೆ, ಸಂಬಂಧಪಟ್ಟ ಗ್ರಾಮಗಳ ಜನಸಂಖ್ಯೆ, ಭೌಗೋಳಿಕ ವ್ಯಾಪ್ತಿ ಹಾಗೂ ಪೊಲೀಸ್ ಠಾಣೆಯಿಂದ ಗ್ರಾಮಗಳಿಗೆ ಇರುವ ಸಂಪರ್ಕದಂತಹ ಅಂಶಗಳನ್ನೂ ಪರಿಗಣಿಸುವ ಸಾಧ್ಯತೆ ಇದೆ. ಶಿರಾಡಿ ಘಾಟ್ ಹಾಗೂ ರಾಷ್ಟ್ರೀಯ ಹೆದ್ದಾರಿ-75ರ ಪ್ರಮುಖ ಸಂಚಾರ ಮಾರ್ಗವಾಗಿರುವುದರಿಂದ ಈ ಭಾಗದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವೂ ಇದೆ.
ಪ್ರಸ್ತುತ ದಾಖಲೆಗಳಲ್ಲಿ 2023ರಿಂದ 2026ರವರೆಗಿನ ಪ್ರಕರಣಗಳ ಸಂಖ್ಯೆಯನ್ನು ದಾಖಲಿಸಲು ಪ್ರತ್ಯೇಕ ಕಾಲಂಗಳನ್ನು ಸಿದ್ಧಪಡಿಸಲಾಗಿದ್ದು, ಮಾಹಿತಿ ಪೂರ್ಣಗೊಂಡ ಬಳಿಕ ಸಂಬಂಧಪಟ್ಟ ಗ್ರಾಮಗಳ ಅಪರಾಧ ಸ್ಥಿತಿಗತಿಯ ಸಮಗ್ರ ಚಿತ್ರಣ ಲಭ್ಯವಾಗಲಿದೆ. ಈ ಮಾಹಿತಿಯ ಆಧಾರದ ಮೇಲೆ ಶಿರಾಡಿ ಹೊರಠಾಣೆಯನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗೆ ಅಗತ್ಯವಾದ ಅಂಕಿ-ಅಂಶಗಳನ್ನು ಸಿದ್ಧಪಡಿಸುವ ಉದ್ದೇಶ ಹೊಂದಲಾಗಿದೆ.
ಶಿರಾಡಿ ಭಾಗದಲ್ಲಿ ಪೊಲೀಸ್ ವ್ಯವಸ್ಥೆ ಬಲಗೊಂಡರೆ ರಾಷ್ಟ್ರೀಯ ಹೆದ್ದಾರಿ-75ರ ಸಂಚಾರ, ಅಪಘಾತ, ಅಪರಾಧ ನಿಯಂತ್ರಣ ಸೇರಿದಂತೆ ಗಡಿ ಪ್ರದೇಶದ ಗ್ರಾಮಗಳ ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಪೊಲೀಸ್ ಇಲಾಖೆಯ ಈ ಮಾಹಿತಿ ಸಂಗ್ರಹ ಪ್ರಕ್ರಿಯೆ ಮುಂದಿನ ಹಂತದಲ್ಲಿ ಶಿರಾಡಿ ಹೊರಠಾಣೆಯ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗೆ ಯಾವ ರೂಪ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.
ನೆಲ್ಯಾಡಿ: ನೆಲ್ಯಾಡಿ–ಕೌಕ್ರಡಿ ಎಸ್‌ಡಿಪಿಐ ಗ್ರಾಮ ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಗ್ರಾಮ ಸಮಿತಿ ಅಧ್ಯಕ್ಷರಾದ ಸಮದ್ ನೆಲ್ಯಾಡಿ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ...
ಕೊಕ್ಕಡ: ಸಂಗಮ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಮಾದರಿ ಒಕ್ಕೂಟ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಅಂಬೇಡ್ಕರ್ ಭವನದಲ್ಲಿ ಒಕ್ಕೂಟದ ಅಧ್ಯಕ್ಷೆ ಕುಸುಮ ಅವರ ಅಧ್ಯಕ್ಷತೆಯಲ್ಲಿ ...
ಕೊಕ್ಕಡ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಸರ್ವೆ ನಂಬರ್ 69/1ರ ವ್ಯಾಪ್ತಿಯಲ್ಲಿರುವ ಅರಣ್ಯ ಹಾಗೂ ಕಂದಾಯ ಭೂಮಿಯ ಸಕ್ರಮೀಕರಣ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಹಲವು ವರ್ಷಗಳಿಂದ ...
ನೆಲ್ಯಾಡಿ: ನೆಲ್ಯಾಡಿ ವಲಯ ಬಂಟರ ಸಂಘದ ಮಹಾಸಭೆಯು ನೆಲ್ಯಾಡಿ ಹಾಲು ಉತ್ಪಾದಕರ ಸಂಘದ ಕ್ಷೀರ ಸಂಗಮ ಸಭಾಂಗಣದಲ್ಲಿ ನಡೆಯಿತು. ಪ್ರತಾಪ್ ಚಂದ್ರ ರೈ ಕುದ್ಮಾರುಗುತ್ತು ಅವರ ಅಧ್ಯಕ್ಷತೆಯಲ್ಲಿ ...
ನೆಲ್ಯಾಡಿ: ನೆಲ್ಯಾಡಿ ಪೇಟೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಾಲ ವಿಕಾಸ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ...
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆಯು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ನಾಗರಪಂಚಮಿ ಹಿನ್ನೆಲೆಯಲ್ಲಿ ಸೀಮೆಯ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಬೆಳಗ್ಗಿನಿಂದಲೇ ...
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ನಾಗರಪಂಚಮಿ ಅಂಗವಾಗಿ ನಾಗದೇವರಿಗೆ ವಿಶೇಷ ತಂಬಿಲ, ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸೇರಿದಂತೆ ...
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ...
ಗೋಳಿತೊಟ್ಟು: ಸರಕಾರಿ ಶಾಲೆಯಲ್ಲಿ ಆಟಿ ತಿಂಗಳ ವಿಶೇಷತೆ, ತುಳುನಾಡಿನ ಸಾಂಪ್ರದಾಯಿಕ ಆಚರಣೆ ಹಾಗೂ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸುವ ‘ಆಟಿದೊಂಜಿ ದಿನ’ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮಕ್ಕೆ ...
ನೆಲ್ಯಾಡಿ: ಯುವಜನರಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ಜನರೊಂದಿಗೆ ಬೆರೆಯುವ ಉದ್ದೇಶದಿಂದ ನೆಲ್ಯಾಡಿ ಜೇಸಿಐ ವತಿಯಿಂದ ಆಯೋಜಿಸಲಾದ ...
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಆಗಸ್ಟ್ ತಿಂಗಳ ಸಾಮಾನ್ಯ ಸಭೆಯು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಿತೇಶ್ ಎಂ.ಸ್ಟ್ರೆಲ್ಲಾ ...
ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘ ನೆಲ್ಯಾಡಿ–ಕೌಕ್ರಾಡಿ ಇದರ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕೋಡಿಮನೆ ರಾಮಣ್ಣ ನಾಯ್ಕ ಅವರು ದೀಪ ಬೆಳಗಿಸಿ ...
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ...
ಧಾರ್ಮಿಕ ಹಾಗೂ ಸಾಂಸ್ಕೃತಿಕ 📅 ಆಗಸ್ಟ್ 16, 2026 ರಾಮಾಯಣ ಪಾರಾಯಣ ಸಮಾಪ್ತಿ ದಿನಾಚರಣೆ: ನೆಲ್ಯಾಡಿ ಕೆ.ಎನ್.ಎಸ್.ಎಸ್. ಕಚೇರಿಯಲ್ಲಿ ಭಕ್ತಿಭಾವದ ಸಂಭ್ರಮ ಶ್ರೀ ಚಂದ್ರಶೇಖರನ್ ನಾಯರ್ ಅವರ ...
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ. ಶಾಂತಿನಗರ ...
ಗೊಳಿತ್ತೋಟ್ಟು: ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಣಾಲು ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ಉದ್ದೇಶದಿಂದ ನಡೆದ ...
ಅರಸಿನಮಕ್ಕಿ : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅರಸಿನಮಕ್ಕಿ ...
ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ದರ್ಭೇತಡ್ಕದಲ್ಲಿರುವ ಪರಶುರಾಮ ದೇವಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪರಶುರಾಮ ವನದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ದೇವಾಲಯದ ಅರ್ಚಕರಾದ ಅಶೋಕ ...
ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬದ್ರಿಯಾ ಜುಮಾ ಮಸೀದಿ ಖತೀಬರಾದ ಖಲಂದರ್ ...
ಶಿಶಿಲ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿಯ ವಾತಾವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣದ ಬಳಿಕ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳ ...
ನೆಲ್ಯಾಡಿ: ಅಶ್ವಿನಿ ಆಸ್ಪತ್ರೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂತ ಚಾರ್ಜ್ ಪದವಿಪೂರ್ವ ಕಾಲೇಜಿನ ಆಂಗ್ಲ ಮಾಧ್ಯಮ ವಿಭಾಗದ ನಿವೃತ್ತ ಮುಖ್ಯಶಿಕ್ಷಕ ...
ನೆಲ್ಯಾಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ನೆಲ್ಯಾಡಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಎಸ್‌ಡಿಟಿಯು ನೆಲ್ಯಾಡಿ ಅಧ್ಯಕ್ಷ ನೌಶಾದ್ ದೊಂತಿಲ ಧ್ವಜಾರೋಹಣ ನೆರವೇರಿಸಿದರು.ಗಲ್ಫ್ ನೆಲ್ಯಾಡಿ ...
ನೆಲ್ಯಾಡಿ: ನೆಲ್ಯಾಡಿ–ಕೌಕ್ರಡಿ ಎಸ್‌ಡಿಪಿಐ ಗ್ರಾಮ ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಗ್ರಾಮ ಸಮಿತಿ ಅಧ್ಯಕ್ಷರಾದ ಸಮದ್ ನೆಲ್ಯಾಡಿ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ...
ಕೊಕ್ಕಡದಲ್ಲಿ ಕೃಷಿಕರ ಸಮಾಲೋಚನಾ ಸಭೆ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆಗೆ ಮನವಿ ಕೊಕ್ಕಡ: ಆನೆ ಹಾವಳಿ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯಿಂದ ಕೃಷಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ...
ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅದ್ದೂರಿ ಸ್ವಾತಂತ್ರ್ಯೋತ್ಸವ | ಹಿರಿಯರಿಗೆ ಸನ್ಮಾನ ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ...
ನೆಲ್ಯಾಡಿ ಸಂತ ಚಾರ್ಜ್ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ, ಪ್ರತಿಭಾ ಪ್ರದರ್ಶನ, ಠಾಗೋರ್ ಅವರ ಪುಣ್ಯಸ್ಮರಣೆ ನೆಲ್ಯಾಡಿ: ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವುದು ವಿಶೇಷವಾದ ಜವಾಬ್ದಾರಿಯಾಗಿದೆ. ಈ ...
ನೆಲ್ಯಾಡಿ: ಮಹಾತ್ಮಗಾಂಧಿ ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಭಾರತಿ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ...
ಕೊಕ್ಕಡ : ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು ...
ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ನಿವಾಸಿ, ಮಾಜಿ ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಜಯಾನಂದ ಬಂಟ್ರಿಯಾಲ್ (54) ಅವರು ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ...
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜನೆ | ಉಚಿತ ತಪಾಸಣೆ, ಆರೋಗ್ಯ ಸಲಹೆ; ಆಯುರ್ವೇದ ಔಷಧಿಗಳಿಗೆ ಶೇ.10 ರಿಯಾಯಿತಿ ನೆಲ್ಯಾಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯ ...
ನೆಲ್ಯಾಡಿ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕುಕ್ಕೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನೆಲ್ಯಾಡಿ ತಾಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ...
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಡಬ ತಾಲೂಕು, ನೆಲ್ಯಾಡಿ ಕಾರ್ಯಕ್ಷೇತ್ರದ ವತಿಯಿಂದ ನೆಲ್ಯಾಡಿಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ...
ಮಣ್ಣಗುಂಡಿಯಲ್ಲಿ ಮಧ್ಯಭಾಗದ ತೆರವು, ನೆಲ್ಯಾಡಿ–ಬೆಥನಿ ನಡುವೆ ಸರ್ವಿಸ್ ರಸ್ತೆ; ಗೋಳಿತೊಟ್ಟಿನಲ್ಲಿ ಅಪಾಯಕಾರಿ ತೆರವು ಸ್ಥಳಾಂತರಕ್ಕೆ ಮನವಿ ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ...
ಉಪ್ಪಿನಂಗಡಿ, ಕಡಬ, ಧರ್ಮಸ್ಥಳ ಠಾಣೆಗಳ ವ್ಯಾಪ್ತಿಯ ಗ್ರಾಮಗಳ ಪ್ರಕರಣಗಳ ವಿವರ ಕೋರಿಕೆ | ಜನಸಂಖ್ಯೆ, ಪ್ರಕರಣಗಳ ಸಂಖ್ಯೆ, ಠಾಣೆ ವ್ಯಾಪ್ತಿ ಬದಲಾವಣೆಯ ಮಾಹಿತಿಗೂ ಒತ್ತು ನೆಲ್ಯಾಡಿ: ನೆಲ್ಯಾಡಿಯಲ್ಲಿ ...
ಪುತ್ತೂರು: ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮವು ...
ಕಾಡಾನೆ ದಾಳಿ ತಡೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ; ಮುಂದಿನ ಹೋರಾಟದ ರೂಪುರೇಷೆ, ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ...
ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ನೇರ್ಲ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಮಂಗಳೂರಿನ ತಿರುಮಲ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಯುವ ಉದ್ಯಮಿ ...
ಸುಬ್ರಮಣ್ಯ : ರೋಟರಿ ಕ್ಲಬ್ ಸುಬ್ರಮಣ್ಯ ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಬ್ಬೆಕೇರಿಗೆ ವಿದ್ಯಾರ್ಥಿಗಳ ಪಾಠ ಪ್ರವಚನಕ್ಕೆ ಅನುಕೂಲವಾಗುವಂತೆ ಟೇಬಲ್ ...
ಕೊಕ್ಕಡ: ನಿಡ್ಲೆ ಗ್ರಾಮದ ನೆಡಿಲು ಪರಿಸರದಲ್ಲಿ ಮಂಗಳವಾರದಂದು ರಾತ್ರಿ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಬಾಳೆಗಿಡ ಹಾಗೂ ಅಡಿಕೆ ಗಿಡಗಳನ್ನು ನಾಶಪಡಿಸಿರುವ ಘಟನೆ ನಡೆದಿದೆ. ನೆಡಿಲು ಗ್ರಾಮದ ನಾರಾಯಣ ...
ರಾಮಕುಂಜ: ಫಿಡ್ಜ್ ಏಕಾಏಕಿ ಸ್ಪೋಟಗೊಂಡು ಅಡುಗೆ ಕೋಣೆಯಲ್ಲಿದ್ದ ಸೊತ್ತುಗಳು ಸುಟ್ಟುಹೋದ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಆ.11ರಂದು ಮಧ್ಯಾಹ್ನ 3ಗಂಟೆ ವೇಳೆಗೆ ನಡೆದಿದೆ ...
ಔಷಧೀಯ ಗುಣದ ಸಾಂಪ್ರದಾಯಿಕ ತಿಂಡಿ-ತಿನಿಸುಗಳ ಪ್ರದರ್ಶನ; ಸಾಧಕರಿಗೆ ಸನ್ಮಾನ ನೆಲ್ಯಾಡಿ: ಶಿವಳ್ಳಿ ಸಂಪದದ ವತಿಯಿಂದ 12ನೇ ವರ್ಷದ ಆಟಿ ಸಂಭ್ರಮವನ್ನು ಆರೋಗ್ಯ ಜಾಗೃತಿ ಕಾರ್ಯಕ್ರಮವಾಗಿ ಹಾರ್ಪಳ ಶ್ರೀ ...
ಇಚ್ಲಂಪಾಡಿ: ನೇರ್ಲ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಪೋಷಕರು ತಮ್ಮ ಮನೆಗಳಲ್ಲಿ ಸಾಂಪ್ರದಾಯಿಕವಾಗಿ ತಯಾರಿಸಿದ ವಿವಿಧ ...
ಮೂರು–ನಾಲ್ಕು ವರ್ಷಗಳಿಂದ ಉಲ್ಬಣಿಸಿದ ಮಾನವ–ವನ್ಯಜೀವಿ ಸಂಘರ್ಷ; ಆರು ಜೀವಹಾನಿ, ನಿರಂತರ ಬೆಳೆ ನಾಶ, ಶಾಶ್ವತ ಪರಿಹಾರಕ್ಕೆ ರಾಜ್ಯ ಸರಕಾರದ ವಿಶೇಷ ಕಾರ್ಯಯೋಜನೆ ಅಗತ್ಯ ನೆಲ್ಯಾಡಿ: ದಕ್ಷಿಣ ಕನ್ನಡ ...
₹30.79 ಕೋಟಿ ವ್ಯವಹಾರ; ಸದಸ್ಯರಿಗೆ ಶೇ.12ರಷ್ಟು ಲಾಭಾಂಶ, ರಬ್ಬರ್ ಪೂರೈಕೆದಾರರಿಗೆ ಕೆ.ಜಿ.ಗೆ ₹1 ಬೋನಸ್ ನೆಲ್ಯಾಡಿ: ಪುತ್ತೂರು ತಾಲ್ಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕಳೆಂಜ ಗ್ರಾಮದ ಪಿಲ್ಯಡ್ಕ, ಬರಮೇಲು ಹಾಗೂ ಕೊಕ್ಕಡ ಗ್ರಾಮದ ಸಿಬ್ಬಂತಿ ಪ್ರದೇಶಗಳಲ್ಲಿ ಕಾಡಾನೆಗಳು ...
ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲು ಹಣಕಾಸು ವಿಚಾರದಲ್ಲಿನ ವೈಮನಸ್ಸೇ ಕಾರಣ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇದೇ ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ...
ಕಡಬ : ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ...
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದ್ದು, ...
ನೆಲ್ಯಾಡಿ: ಆಲಂತಾಯ ಎಸ್‍ಡಿಎಂಸಿ, ಪೂರ್ವ ವಿದ್ಯಾರ್ಥಿ ಸಂಘ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಆಲಂತಾಯ ಒಕ್ಕೂಟ ಹಾಗೂ ...
ನೆಲ್ಯಾಡಿ: ಗೋಳಿತಟ್ಟು ಸರ್ಕಾರಿ ಶಾಲೆಯಲ್ಲಿ 2027-28ನೇ ಸಾಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ರಚನಾ ಸಭೆಯು ನಡೆಯಿತು. ಸಭೆಯಲ್ಲಿ ಅಧ್ಯಕ್ಷರಾಗಿ ಪುರುಷೋತ್ತಮ ಕುದ್ಕೋಳಿ, ಉಪಾಧ್ಯಕ್ಷರಾಗಿ ಹಸೀನಾ ಪರ್ವಿಂತಾಜ್, ...
ನೆಲ್ಯಾಡಿ: ಭಾರಿ ಮಳೆಯಿಂದ ಹದಗೆಟ್ಟು ಸಂಚಾರಕ್ಕೆ ಅಸಾಧ್ಯವಾಗಿದ್ದ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ನೀರಬೈಲು ಎಸ್‌ಸಿ ಕಾಲೋನಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಗ್ರಾಮಸ್ಥರೇ ಶ್ರಮದಾನ ಹಾಗೂ ಸ್ವಂತ ...
ಇಲಾಖೆಗಳು ಫುಟ್‌ಬಾಲ್‌ನಂತೆ ಗೋಲ್ ಪಾಸ್ ಮಾಡಬೇಡಿ; ಸಮಸ್ಯೆಗೆ ಗೋಲ್ ಹೊಡೆಯುವಂತೆ ಪರಿಹಾರ ನೀಡಿ – ಜನರ ಸಮಸ್ಯೆಗೆ ತ್ವರಿತ ಸ್ಪಂದನೆಗೆ ಕಟ್ಟುನಿಟ್ಟಿನ ಸೂಚನೆ ಕಡಬ: ಪ್ರಾಕೃತಿಕ ವಿಕೋಪದಿಂದ ...
ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿರುವ 44ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ಅರ್ಚಕ ಅಶ್ವಥ್ ನಾರಾಯಣ್ ಭಟ್ ...
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಬರ್ಚಿನಹಳ್ಳ ಸಮೀಪ ಬುಧವಾರ ಬೆಳಿಗ್ಗೆ ಸಂಭವಿಸಿದ ಟ್ಯಾಂಕರ್ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವಿನ ಭೀಕರ ಅಪಘಾತದಲ್ಲಿ ಬಸ್ ...
ಕೊಕ್ಕಡ :ಹತ್ಯಡ್ಕ ಗ್ರಾಮದ ಪಾರ್ಪಿಕಲ್ಲು ಸಮೀಪದ ದರ್ಬೆತಡ್ಕದಲ್ಲಿ ಮಂಗಳವಾರ ರಾತ್ರಿ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಅಡಿಕೆ, ಬಾಳೆ ಹಾಗೂ ತೆಂಗಿನ ಗಿಡಗಳನ್ನು ಧ್ವಂಸಗೊಳಿಸಿ ಅಪಾರ ಹಾನಿ ಉಂಟುಮಾಡಿದ ...
ಇಚ್ಲಂಪಾಡಿ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಸಾಮಾಜಿಕ ಹೊಣೆಗಾರಿಕೆಯಾಗಿದ್ದು, ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಉಳಿಸಿ ಕೊಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ...
ಬೆಳ್ತಂಗಡಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹಾಗೂ ಸಮಾಜದಲ್ಲಿ ವೈಮನಸ್ಸು ಸೃಷ್ಟಿಸುವ ಉದ್ದೇಶದಿಂದ ಪ್ರಚೋದನಾಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ...
ಶಿಶಿಲ: ಕಳೆದ ಎರಡು ವರ್ಷಗಳಿಂದ ಶಿಶಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆ ಮಾಪನ ಯಂತ್ರ ಕಾರ್ಯನಿರ್ವಹಿಸದೇ ಇರುವುದರಿಂದ ರೈತರು ಎದುರಿಸುತ್ತಿದ್ದ ಸಮಸ್ಯೆಗೆ ಕೊನೆಗೂ ಪರಿಹಾರ ದೊರೆತಿದೆ. ಕೃಷಿ ...
ಕೊಕ್ಕಡ : ನಿರಂತರ ಭಾರೀ ಮಳೆಯ ಪರಿಣಾಮ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹತ್ಯಡ್ಕ ಸಮೀಪದ ಉಚ್ಚಿಕಟ್ಟದಲ್ಲಿ ಸಣ್ಣ ನೀರಾವರಿ ಇಲಾಖೆಯು ನಿರ್ಮಿಸಿರುವ ಡ್ಯಾಂನಲ್ಲಿ ಮರಮುಟ್ಟುಗಳು ಸಿಲುಕಿಕೊಂಡ ...
ನೆಲ್ಯಾಡಿ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ತೋಡು, ಹಳ್ಳ-ತೊರೆಗಳು ಹಾಗೂ ಕುಮಾರಧಾರಾ ಮತ್ತು ಗುಂಡ್ಯಹೊಳೆಗಳು ತುಂಬಿ ಹರಿಯುತ್ತಿದ್ದು, ಗುಂಡ್ಯಹೊಳೆಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದೆ. ಮಳೆಯ ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಮುಂದಿನ ದಿನಗಳಲ್ಲೂ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ...
ನೆಲ್ಯಾಡಿ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಡಬ ತಾಲೂಕಿನ ಪೆರಿಯಶಾಂತಿ ಸಮೀಪ ಭಾನುವಾರದಂದು ಗುಡ್ಡ ಕುಸಿದು, ಅದರೊಂದಿಗೆ ದೊಡ್ಡ ಗಾತ್ರದ ಮರವೊಂದು ರಸ್ತೆಗೆ ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮುಂದುವರಿದಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ...
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.), ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದಲ್ಲಿ ಭಾನುವಾರ ಕೃಷಿ ಸ್ವಉದ್ಯೋಗ ತರಬೇತಿ ಕಾರ್ಯಕ್ರಮ ...
ಉಪ್ಪಿನಂಗಡಿ: ಗ್ರಾಮದ ಹಿರ್ತಡ್ಕ ಸಮೀಪ ಹರಿಯುವ ನೇತ್ರಾವತಿ ನದಿ ದಡದಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 3.00 ಗಂಟೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಉಪ್ಪಿನಂಗಡಿ ...
ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕರೊಬ್ಬರು ಬಲಿಯಾದ ದಾರುಣ ಘಟನೆ ಶನಿವಾರ ಸಂಜೆ ನಡೆದಿದೆ. ಮೃತರನ್ನು ...
ನೆಲ್ಯಾಡಿ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ತೋಡು, ಹಳ್ಳ-ತೊರೆಗಳು ಹಾಗೂ ಕುಮಾರಧಾರಾ ಮತ್ತು ಗುಂಡ್ಯಹೊಳೆಗಳು ತುಂಬಿ ಹರಿಯುತ್ತಿದ್ದು, ಗುಂಡ್ಯಹೊಳೆಯಲ್ಲಿ ಪ್ರವಾಹ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನದಿಗಳು, ಹಳ್ಳಗಳು ಹಾಗೂ ತೊರೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ ...
ನೆಲ್ಯಾಡಿ: ಧರ್ಮಸ್ಥಳ–ಸುಬ್ರಹ್ಮಣ್ಯ ಸಂಪರ್ಕಿಸುವ ಕೌಕ್ರಾಡಿ ಗ್ರಾಮದ ದಡ್ಡಲಪಳಿಕೆ ಎಂಬಲ್ಲಿ ಶನಿವಾರ ಸುರಿದ ಭಾರೀ ಗಾಳಿ-ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಪರಿಣಾಮ ಸುಮಾರು ಒಂದೂವರೆ ...
ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 38 ವರ್ಷಗಳ ಕಾಲ ಗುಮಾಸ್ತರಾಗಿ ಹಾಗೂ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಜು.31ರಂದು ನಿವೃತ್ತರಾದ ರತ್ನಾಕರ ...
ನೆಲ್ಯಾಡಿ: ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಚ್ಲಂಪಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷಯ್ ಹೋಟೆಲ್ ಬಂದ್ ಮಾಡುವುದಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿ ಪುತ್ತೂರು ಸಿವಿಲ್ ನ್ಯಾಯಾಲಯ ಜು.28ರಂದು ಆದೇಶಿಸಿದೆ. ಅಕ್ಷಯ್ ...
ಕೊಕ್ಕಡ: ವಿಪರೀತ ಮಳೆಯ ಪರಿಣಾಮವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪದ ಕಿಂಡಿ ಅಣೆಕಟ್ಟಿನಲ್ಲಿ ದೊಡ್ಡ ಗಾತ್ರದ ಮರದ ದಿಮ್ಮಿಗಳು ಹಾಗೂ ಕೊಂಬೆಗಳು ಸಿಕ್ಕಿಹಾಕಿಕೊಂಡು ನೀರಿನ ಹರಿವಿಗೆ ...
✍🏻 ಡಾ.ಎ.ಜಯಕುಮಾರ ಶೆಟ್ಟಿ, ಉಜಿರೆ ಡಿಜಿಟಲ್ ಯುಗದಲ್ಲಿ ಸಾವಿರಾರು ಸಂಪರ್ಕಗಳಿದ್ದರೂ ನಿಜವಾದ ಆತ್ಮೀಯ ಸಂಬಂಧಗಳು ಮತ್ತು ಆಪ್ತ ಸ್ನೇಹಿತರ ಕೊರತೆ ಹೆಚ್ಚುತ್ತಿರುವುದು ಸಮಾಜದ ದೊಡ್ಡ ಸವಾಲಾಗಿ ಪರಿಣಮಿಸಿದೆ ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ...
ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯ ಪಾಲಕರ ವಾರ್ಷಿಕ ಮಹಾಸಭೆ ಹಾಗೂ ಪುನಶ್ಚೇತನ ಕಾರ್ಯಕ್ರಮವು ಶುಕ್ರವಾರ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸ್ಥಾಪಕ ...
ಕಡಬ: ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಶುಕ್ರವಾರದಂದು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬೀಸಿದ ಬಿರುಗಾಳಿ ಹಾಗೂ ಮಳೆಯ ಪರಿಣಾಮ ಅಡಿಕೆಮರವೊಂದು ಮುರಿದು ...
ಬೆಳ್ತಂಗಡಿ: ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪದಡಿ ಓರ್ವನನ್ನು ಬಂಧಿಸಿ, ಮತ್ತೋರ್ವನ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ...
ನೆಲ್ಯಾಡಿ: ನೆಲ್ಯಾಡಿ ನಿವಾಸಿ ಸಾದಿಕ್ ಅವರು ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಲಾರಿಯಲ್ಲಿ ಸರಕು ಸಾಗಿಸುತ್ತಿದ್ದು, ರಾತ್ರಿ ಸುಮಾರು 3 ಗಂಟೆಯ ವೇಳೆಗೆ ತಮ್ಮ ಲಾರಿಯನ್ನು ರಾಷ್ಟ್ರೀಯ ...
ಎನ್‌ಎಚ್-75 ನೆಲ್ಯಾಡಿ ಚತುಷ್ಪಥ ಕಾಮಗಾರಿ ಅವೈಜ್ಞಾನಿಕ; 5 ಸಾವಿರ ವಿದ್ಯಾರ್ಥಿಗಳು, ಸಾರ್ವಜನಿಕರ ಪರದಾಟ – 10 ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಎಚ್ಚರಿಕೆ ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ–75ರಲ್ಲಿ ...
ಉಪ್ಪಿನಂಗಡಿ: 14 ದಿನಗಳ ಹಿಂದೆ ಜುಲೈ 16ರಂದು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಕೊಲೆಗೆ ಬಳಸಿದ್ದ ಮಾರಾಕಾಸ್ತ್ರವನ್ನು ಉಪ್ಪಿನಂಗಡಿಯಲ್ಲಿ ...
ನೆಲ್ಯಾಡಿ: ಬಜತ್ತೂರಿನಲ್ಲಿ ಶುಕ್ರವಾರ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯ ವಿದ್ಯಾರ್ಥಿನಿ ಹಿಮಾನಿ ಅವರು ಅತ್ಯುತ್ತಮ ಪ್ರದರ್ಶನ ...
ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕಕ್ಕೆ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ ಕಾರ್ಯಕ್ರಮ ಭಾನುವಾರ ನೆಲ್ಯಾಡಿಯ ಗೌರಿಜಾಲ್ ಆರ್ಕೇಡ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಂಬರುವ ವಲಯ ಮಟ್ಟದ ಚಟುವಟಿಕೆಗಳು, ...
ಕಡಬ: ಕುತೂಹಲಗಳೇ ಹಲವು ಸಂಶೋಧನೆಗಳಿಗೆ ಕಾರಣವಾಗಿದೆ ಎನ್ನುವುದು ನಮಗೆಲ್ಲಾ ತಿಳಿದ ಸಂಗತಿಯಾಗಿದೆ. ಅದೇ ರೀತಿ ಮಕ್ಕಳು ಎಳೆವೆಯಲ್ಲಿಯೇ ವೈಜ್ಞಾನಿಕತೆಯ ಬಗ್ಗೆ ಆಸಕ್ತಿ ಅಗತ್ಯ ತೆಳೆಯುವುದರಿಂದ ಅದು ಭವಿಷ್ಯದಲ್ಲಿ ...
Leave a Reply