ಕೊಡಾಜೆ: ಖಾಸಗಿ ಬಸ್-ಬೈಕ್ ನಡುವೆ ಅಪಘಾತ; ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಗಂಭೀರ

ಕೊಡಾಜೆ: ಖಾಸಗಿ ಬಸ್-ಬೈಕ್ ನಡುವೆ ಅಪಘಾತ; ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಗಂಭೀರ

ನೇಸರ ಮಾ.29: ಬಸ್ಸು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಹೆಡ್ ಕಾನ್ಸ್‌ಟೇಬಲ್ ಗಂಭೀರ ಗಾಯಗೊಂಡ ಘಟನೆ ಕೊಡಾಜೆ ಎಂಬಲ್ಲಿ ಮಂಗಳವಾರ ನಡೆದಿದೆ.
ಬೈಕ್‌ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಧರ್ಣಪ್ಪ ಗೌಡ ಮತ್ತು ಅವರ ಪುತ್ರಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಂಭೀರ ಗಾಯಗೊಂಡ ಧರ್ಣಪ್ಪ ಗೌಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ

ವೀಕ್ಷಿಸಿ SUBSCRIBERS ಮಾಡಿ

Leave a Reply

You May Have Missed

error: Content is protected !!