ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ ಎದೆನೋವು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ ಎದೆನೋವು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ನೇಸರ ಎ.05: ಆರೆಸ್ಸೆಸ್ ಮುಖಂಡ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ಆರೋಗ್ಯದಲ್ಲಿ ಸಣ್ಣ ಮಟ್ಟಿನ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮನೆಯಲ್ಲಿದ್ದ ಪ್ರಭಾಕರ್ ಭಟ್ ಅವರಿಗೆ ಕಡಿಮೆ ರಕ್ತದೊತ್ತಡ ಕಾರಣದಿಂದ ಆರೋಗ್ಯದಲ್ಲಿ ಏರುಪೇರಾಗಿತ್ತು. ಜತೆಗೆ ಸಣ್ಣ ಪ್ರಮಾಣದಲ್ಲಿ ಎದೆನೋವಿನ ಲಕ್ಷಣ ಕೂಡ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.
ಡಾ. ಭಟ್ ಚೇತರಿಸಿಕೊಂಡಿದ್ದು, ಯಾರೂ ಗಾಬರಿಗೆ ಒಳಗಾಗುವುದು ಬೇಡ ಎಂದು ಆಪ್ತ ವಲಯಗಳು ತಿಳಿಸಿವೆ. ಸದ್ಯ ಭಟ್‌ ಅವರ ಆರೋಗ್ಯ ಸ್ಥಿರವಾಗಿದ್ದು, ಆಂಜಿಯೋಗ್ರಾಮ್ ಮಾಡಲು ವೈದ್ಯರು ಸೂಚಿಸಿದ್ದಾರೆ. ಅವರ ಅರೋಗ್ಯದ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಸಿಗಬೇಕಿದೆ.

Leave a Reply

You May Have Missed

error: Content is protected !!