ನೀರಕಟ್ಟೆ: ಕಾರು, ಬಸ್ಸು ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

ನೀರಕಟ್ಟೆ: ಕಾರು, ಬಸ್ಸು ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

ನೇಸರ ಎ.16: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಎ.16ರಂದು ಮಧ್ಯಾಹ್ನ ನಡೆದಿದೆ.

ಉಪ್ಪಿನಂಗಡಿ ಯಿಂದ ನೆಲ್ಯಾಡಿ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ನೀರಕಟ್ಟೆಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಘಟನೆಯಿಂದಾಗಿ ಅರ್ದ ತಾಸು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಯಿತು.

—ಜಾಹೀರಾತು–

Leave a Reply

You May Have Missed

error: Content is protected !!