ಬೇರಿಕೆಯಲ್ಲಿ ಕಾರು-ಬೈಕ್ ಅಪಘಾತ: ಬೆಳ್ಳಿಪ್ಪಾಡಿ ನೆಕ್ಕರೆಯ ಅಶ್ವತ್ಥ್ ಮೃತ್ಯು

ನೇಸರ ಎ.16: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಬೇರಿಕೆಯಲ್ಲಿ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಎ.16ರಂದು ಸಂಜೆ ನಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಬೆಳ್ಳಿಪ್ಪಾಡಿ ಗ್ರಾಮದ ನೆಕ್ಕರೆಯ ಅಶ್ವತ್ಥ್(17ವ)ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಗಂಭೀರ ಗಾಯಗೊಂಡ ವರ್ಷಿತ್ ಅವರನ್ನು ಅದೇ ದಾರಿಯಲ್ಲಿ ಬರುತ್ತಿದ್ದ ಕಾರಿನವರು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಪುತ್ತೂರು ಸಂಚಾರ ಠಾಣಾ ಎಸ್.ಐ. ರಾಮ ನಾಯ್ಕ್ ಅವರು ಪ್ರಕರಣ ದಾಖಲಿಸಿದ್ದಾರೆ. ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಶ್ವತ್ಥ್ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
—ಜಾಹೀರಾತು—


















Leave a Reply