ಅರಿಕೆಗುಡ್ಡೆಯ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ನವಚಂಡಿಕಾಯಾಗ

ಅರಿಕೆಗುಡ್ಡೆಯ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ನವಚಂಡಿಕಾಯಾಗ

ನೇಸರ ಮೇ‌.2: ನೂತನವಾಗಿ ಜೀರ್ಣೋದ್ಧಾರ ಗೊಳ್ಳುತ್ತಿರುವ ಬೆಳ್ತಂಗಡಿ ತಾಲ್ಲೂಕಿನ ಹತ್ಯಡ್ಕ ಗ್ರಾಮದ ಆರಿಕೆ ಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಮೇ 3 ರಂದು ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನವಚಂಡಿಕಾಯಾಗ ನಡೆಯಲಿದೆ.
ಯಾಗದ ಪೂರ್ಣಾಹುತಿ ನಂತರ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲ್ಲೂಕಿನ ಶಾಸಕ ಹರೀಶ್ ಪೂಂಜ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ
.

 

🌸 ಜಾಹೀರಾತು 🌸

Leave a Reply

You May Have Missed

error: Content is protected !!