ನೆಲ್ಯಾಡಿ ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕ ಮೇದಪ್ಪ ಪಿ.ಹೆಗ್ಡೆ ನಿಧನ

ನೆಲ್ಯಾಡಿ ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕ ಮೇದಪ್ಪ ಪಿ.ಹೆಗ್ಡೆ ನಿಧನ

ನೇಸರ ಮೇ‌ 21: ನೆಲ್ಯಾಡಿ: ಅನಾರೋಗ್ಯದಿಂದ ಬಳಲುತ್ತಿದ್ದ ನೆಲ್ಯಾಡಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕ, ನೆಲ್ಯಾಡಿ ಗ್ರಾಮದ ಪಟ್ಟೆಜಾಲು ನಿವಾಸಿ ಮೇದಪ್ಪ ಪಿ.ಹೆಗ್ಡೆ(53ವ.)ರವರು ಮೇ 21ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇಂದು(ಮೇ 21) ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನರಾದರು. ನೆಲ್ಯಾಡಿಯ ಗ್ರಂಥಾಲಯದಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು. ಹಲವು ವರ್ಷದ ಹಿಂದೆ ನೆಲ್ಯಾಡಿಯಲ್ಲಿ ಸುದ್ದಿಬಿಡುಗಡೆ ಪತ್ರಿಕೆಯ ಪ್ರತಿನಿಧಿಯಾಗಿಯೂ ಕೆಲಸ ಮಾಡಿದ್ದರು. ಮೃತರು ಪತ್ನಿ ನಳಿನಿ, ಪುತ್ರಿ ಮನೀಷಾ, ಪುತ್ರ ಅನೀಶ್‌ರವರನ್ನು ಅಗಲಿದ್ದಾರೆ.

ವೀಕ್ಷಿಸಿ SUBSCRIBERS ಮಾಡಿ

ಜಾಹೀರಾತು

Leave a Reply

You May Have Missed

error: Content is protected !!