ಕುಂಟಾಲಪಲ್ಕೆ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ 600 ಅಂಕ ಪಡೆದ ವಿದ್ಯಾರ್ಥಿನಿಗೆ ಸನ್ಮಾನ

ಕುಂಟಾಲಪಲ್ಕೆ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ 600 ಅಂಕ ಪಡೆದ ವಿದ್ಯಾರ್ಥಿನಿಗೆ ಸನ್ಮಾನ

ನೇಸರ ಮೇ‌ 21: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 600 ಅಂಕಗಳೊಂದಿಗೆ ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದ ನಿಶಿತಾ ಇವರನ್ನು ಕಪಿಲಾ ಕೇಸರಿ ಯುವಕ ಮಂಡಲ ಇದರ ವತಿಯಿಂದ ಸನ್ಮಾನಿಸಲಾಯಿತು.
ಹತ್ಯಡ್ಕ ಗ್ರಾಮದ ನಿವಾಸಿ ಪುರುಷೋತ್ತಮ ಗೌಡ ಹಾಗೂ ಪದ್ಮಾವತಿ ಇವರ ಮಗಳಾದ ನಿಶಿತಾ ಬಡಕುಟುಂಬದಲ್ಲಿ ಬೆಳೆದರು ಓದಿಗೆ ಬಡತನವಿಲ್ಲ ಎಂದು ನಿರೂಪಿಸಿದ್ದಾರೆ. ಕಾರ್ಯಕ್ರಮದಲ್ಲಿ ಕಪಿಲ ಕೇಸರಿ ಯುವಕ ಮಂಡಲದ ಅಧ್ಯಕ್ಷರಾದ ರಾಜೇಶ್ ಗೌಡ ಹಾಗೂ ಯುವಕ ಮಂಡಲದ ಸದಸ್ಯರು ಹಾಜರಿದ್ದು ವಿದ್ಯಾರ್ಥಿನಿಯ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು.

ವೀಕ್ಷಿಸಿ SUBSCRIBERS ಮಾಡಿ

ಜಾಹೀರಾತು

Leave a Reply

You May Have Missed

error: Content is protected !!