ಶಂಭೂರಿನ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಶಂಭೂರಿನ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ನೇಸರ ಜೂ.06: ಜೆಸಿಐ ಜೋಡುಮಾರ್ಗ ನೇತ್ರಾವತಿ ಸಹಯೋಗದಲ್ಲಿ ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಅರಣ್ಯ ಇಲಾಖೆಯ ಅರಣ್ಯ ರಕ್ಷಕರಾದ ದಯಾನಂದ ಮತ್ತು ಶ್ರೀಮತಿ ಅನಿತಾ ರವರು ಶಾಲಾ ಪರಿಸರದಲ್ಲಿ ಗಿಡ ನೆಟ್ಟು ಶಾಲಾ ಮಕ್ಕಳು ಮತ್ತು ಪರಿಸರದ ವ್ಯಕ್ತಿಗಳಿಗೆ ಗಿಡಗಳನ್ನು ವಿತರಿಸಿ ಪರಿಸರ ಸಂರಕ್ಷಣೆಯ ಬಗ್ಗೆ ತಿಳಿಸಿದರು.
ಶಿಕ್ಷಣ ಇಲಾಖೆಯ ಸಿ ಆರ್ ಪಿ ಸತೀಶ್ ಭಟ್, ಮುಖ್ಯ ಶಿಕ್ಷಕರಾದ ಕಮಲಾಕ್ಷ ಕಲ್ಲಡ್ಕ, ಜೆಸಿಐ ಅಧ್ಯಕ್ಷರಾದ ಹರಿಪ್ರಸಾದ್ ಕುಲಾಲ್, ಶಿಕ್ಷಕರಾದ ಭಾರತಿ, ವಸಂತಿ, ವರಮಹಾಲಕ್ಷ್ಮೀ, ಪ್ರಕಾಶ್, ಹರೀಶ್, ಮಂಜುಶ್ರೀ, ಶ್ರುತಿ ಉಪಸ್ಥಿತರಿದ್ದರು. ಶಾಲಾ ನಾಯಕ ಕಾರ್ತಿಕ್ ಸ್ವಾಗತಿಸಿ, ಶಿಕ್ಷಕಿ ಭಾರತಿ ವಂದಿಸಿದರು.

ವೀಕ್ಷಿಸಿ SUBSCRIBERS ಮಾಡಿ

ಜಾಹೀರಾತು

Leave a Reply

You May Have Missed

error: Content is protected !!